Belagavi News In Kannada | News Belgaum

ಹೆಚ್ಚಿನ ಮತ ಪಡೆಯಲು ಮತದಾರರ ವಿಶ್ವಾಸ ಕಾರಣ: ಸಲೀಂ ಅಹ್ಮದ್

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿಕಾಂಗ್ರೆಸ್ ಪಕ್ಷದ ಸಿದ್ಧಾಂತದ ಗೆಲುವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಅಭ್ಯರ್ಥಿ ಸಲೀಂ ಅಹ್ಮದ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ- ಗದಗ-ಹಾವೇರಿ ಮತಕ್ಷೇತ್ರದ ಮತದಾರರರು ನನ್ನ ಮೇಲಿನ ವಿಶ್ವಾಸದಿಂದ ಹೆಚ್ಚು ಮತಗಳನ್ನು ನೀಡಿ ಗೆಲುವು ಸಾಧಿಸಲು ಕಾರಣರಾಗಿದ್ದಾರೆ ಎಂದು ಸ್ಮರಿಸಿದರು.

ಬಿಜೆಪಿ ಸರ್ಕಾರ ಪಂಚಾಯತ್ ರಾಜ್ಯ ವ್ಯವಸ್ಥೆ ಹಾಳು ಮಾಡಿದ್ದು, ಇವತ್ತುಗ್ರಾಮ ಪಂಚಾಯತ್ ಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಈ ಕುರಿತು ಮುಂದಿನ ದಿನದಲ್ಲಿ ಧ್ವನಿ ಎತ್ತುತ್ತೆನೆ ಎಂದರು.

ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಒಳ ಒಪ್ಪಂದ ಮಾಡಲ್ಲ. ಪಕ್ಷ ಸಿದ್ಧಾಂತಕ್ಕೆ ಬದ್ಧವಿದೆ ಎಂದ ಅವರು, ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲುವು ಖುಷಿ ಕೊಟ್ಟಿದೆ ಎಂದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಗೆ ಅವಕಾಶ ಮಾಡಿ ಕೊಟ್ಟ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.//////