Belagavi News In Kannada | News Belgaum

22 ಮಂದಿ ಪ್ರಯಾಣಿಕರು ಚಲಿಸುತ್ತಿದ್ದ ಬಸ್‌ಗೆ ಬೆಂಕಿ

ಕಾರವಾರ: ಮುಂಬೈನಿಂದ ಮಂಗಳೂರು ಕಡೆ ಹೊರಟಿದ್ದ ಖಾಸಗಿ ಬಸ್‌ವೊಂದು ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಘಟನೆ ಇಂದು ನಡೆದಿದೆ.

 

22 ಪ್ರಯಾಣಿಕರು ಇದ್ದ ಈ ಬಸ್‌ ಚಲಿಸುತ್ತಿರುವಾಗಲೇ ಬೆಂಕಿ ಹೊತ್ತಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿಯ ಹೆದ್ದಾರಿ 63ರಲ್ಲಿ ಈ ಘಟನೆ ನಡೆದಿದೆ.
ಆದರೆ ಅದೃಷ್ಟವಶಾತ್‌ ಪ್ರಾಣಕ್ಕೆ ಹಾನಿಯಾಗಿಲ್ಲ. ಬೆಂಕಿ ಹೊತ್ತಿದ್ದು ತಿಳಿಯುತ್ತಲೇ ಚಾಲಕ ಸಮಯಪ್ರಜ್ಞೆ ಮೆರೆದಿದ್ದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದೆ.
ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಜರಾಗಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.//////