Belagavi News In Kannada | News Belgaum

ಮರಾಠಿ ಲಘು ಪದಾತಿ ದಳ ಕೇಂದ್ರದಲ್ಲಿ “ವಿಜಯ ದಿವಸ”: ಹುತಾತ್ಮ ಯೋಧರಿಗೆ ಮುಖ್ಯ ಮಂತ್ರಿ ಬೊಮ್ಮಾಯಿ ಗೌರವ ಸಮರ್ಪಣೆ ಸೈನಿಕರ ಕ್ಷೇಮಾಭಿವೃದ್ಧಿಗೆ ಸರಕಾರ ಬದ್ಧ

 

ಬೆಳಗಾವಿ  ಡಿ.16: ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಜಯಸಾಧಿಸಿ 50 ವರ್ಷ ಪೂರೈಸಿದ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ “ವಿಜಯ ದಿವಸ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು 1971ರ ಇಂಡೋ-ಪಾಕ್ ಯುದ್ಧದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.
ಬೆಳಗಾವಿಯ ಮರಾಠಿ ಲಘು ಪದಾತಿ ದಳ ಕೇಂದ್ರ(ಎಂ.ಎಲ್.ಆರ್.ಸಿ)ದ ಆವರಣದಲ್ಲಿ ಗುರುವಾರ (ಡಿ.16) ಹಮ್ಮಿಕೊಳ್ಳಲಾಗಿದ್ದ ವಿಜಯ ದಿವಸ ಕಾರ್ಯಕ್ರಮದಲ್ಲಿ ಅವರು ಭಾಗಹಿಸಿದರು.
1971ರ ಇಂಡೋ-ಪಾಕ್ ಯುದ್ದದಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದು ಬಾಂಗ್ಲಾ ದೇಶ ಉದಯಕ್ಕೆ ಕಾರಣರಾದ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಂಡೋ-ಆಪಕ್ ಯುದ್ಧವು ಚರಿತ್ರೆಯಲ್ಲಿ ಭಾರತದ ಶಕ್ತಿಗೆ ಸ್ಥಾನ ಒದಗಿಸಿದೆ. ದೇಶವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಇದು ನಮಗೆ ಮತ್ತಷ್ಟು ಸ್ಪೂರ್ತಿಯಾಗಿದೆ ಎಂದು ತಿಳಿಸಿದರು.
ಸೇನೆ ದೇಶ ರಕ್ಷಣೆಯ ಜೊತೆಗೆ ಆಂತರಿಕ ಭದ್ರತಯಲ್ಲೂ ಪ್ರಮುಖ ಪಆತ್ರ ವಹಿಸುತ್ತಿದೆ. ಗಡಿಯಾಚೆಗಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸುತ್ತಿದೆ. ಇಂಡೋ-ಪಾಕ್ ಯುದ್ದವು ದೇಶದ ಮೂರೂ ಸೇನಾ ಪಡೆಗಳ ಕಾರ್ಯಕ್ಷಮತೆಗೆ ಸಾಕ್ಷಿ. 13 ದಿನಗಳ ಯುದ್ಧದಲ್ಲಿ ಅನೇಕ ಜನರು ಹುತಾತ್ಮರಾದರು. 90 ಸಾವಿರಕ್ಕೂ ಅಧಿಕ ಪಾಕಿಸ್ತಾನ ಸೈನಿಕರು ಶರಣಾರದರು. ಈ ಯುದ್ಧ ಕಲೆಯು ಇಡೀ ಜಗತ್ತು ಭಾರತದ ಸೇನಾಶಕ್ತಿಯ ಕಡೆ ನೋಡುವಂತೆ ಆಯಿತು. ಈ ಯುದ್ಧದ ಬಳಿಕ ಭಾರತ ಸೇನೆ ಮತ್ತಷ್ಟು ಬಲಿಷ್ಠವಾಗಿದೆ. ಪ್ರಸ್ತುತ ಸಮರಕಲೆಯಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದೆ. ಭಾರತ ಕೂಡ ಬದಲಾಗುತ್ತಿರುವ ಸನ್ನಿವೇಶಕ್ಕೆ ತಕ್ಕಂತೆ ಬಲಿಷ್ಠಗೊಳ್ಳುತ್ತಿದೆ. ಪ್ರಧಾನ ಮಂತ್ರಿಗಳ ನೇತೃತ್ವದಲ್ಲಿ ಭಾರತೀಯ ಸೇನೆಯು ಗಡಿಯನ್ನು ಸುರಕ್ಷಿತವಾಗಿಸಿದೆ.
ಇಂಡೋ-ಪಾಕ ಯುದ್ಧವು ಚರಿತ್ರೆಯಲ್ಲಿ ಭಾರತದ ಶಕ್ತಿಗೆ ಸ್ಥಾನ ಒದಗಿಸಿದೆ. ದೇಶವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಇದು ನಮಗೆ ಮತ್ತಷ್ಟು ಸ್ಪೂರ್ತಿಯಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಇದೇ ಸಂದರ್ಭದಲ್ಲಿ ಇತ್ತೀಚಿಗೆ ಹೆಲಿಕಾಪ್ಟರ ದುರಂತದಲ್ಲಿ ನಿಧನರಾದ ಸಿ.ಡಿ.ಎಸ್. ಬಿಪಿನ್ ರಾವತ್ ಹಾಗೂ ಇತರ ಹನ್ನೆರೆಡು ಜನರಿಗೆ ಕೂಡ ಅವರು ನುಡಿ ನಮನ ಸಲ್ಲಿಸಿದರು. ಭಾರತ ಮಾತೆ ಸೇವೆ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ನಾವು ಯಾವುದೇ ವೃತ್ತಿಯಲ್ಲಿ ಇದ್ದರೂ ದೇಶ ಸೇವೆಗೆ ಸಮರ್ಪಿಸಿಕೊಳ್ಳಬೇಕು.
ಶೌರ್ಯ ಪ್ರಶಸ್ತಿ ಮೊತ್ತ ಹೆಚ್ಚಳ: ರಾಜ್ಯ ಸರ್ಕಾರವು ಪರಮವೀರ ಚಕ್ರ, ಮಹಾವೀರ ಚಕ್ರ, ಅಶೋಕ ಚಕ್ರ ಸೇರಿದಂತೆ ವಿವಿಧ ಶೌರ್ಯ ಪ್ರಶಸ್ತಿ ವಿಜೇತರಿಗೆ ಒಂದು ಬಾರಿ ನೀಡಲಾಗುತ್ತಿರುವ ಅನುದಾನ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ಪರಮವೀರ ಚಕ್ರ ವಿಜೇತರಿಗೆ ಸಧ್ಯ ನೀಡುತ್ತಿರುವ ಇಪ್ಪತ್ತೈದು ಲಕ್ಷ ರೂಗಳ ಪ್ರಶಸ್ತಿ ಮೊತ್ತವನ್ನು 1.5 ಕೋಟಿ ರೂ.ಗೆ, ಮಹಾವೀರ ಚಕ್ರ ವಿಜೇತರಿಗೆ ಹನ್ನೆರಡು ಲಕ್ಷ ರೂ. ಗಳಿಂದ 1 ಕೋಟಿ ರೂಗೆ, ಅಶೋಕ ಚಕ್ರ ವಿಜೇತರಿಗೆ ಇಪ್ಪತ್ತೈದು ಲಕ್ಷ ರೂ ಗಳಿಂದ 1.5 ಕೋಟಿ ರೂ.ಗೆ, ಕೀರ್ತಿ ಚಕ್ರ ವಿಜೇತರಿಗೆ ಹನ್ನೆರೆಡು ಲಕ್ಷ ರೂಗಳಿಂದ 1 ಕೋಟಿ ರೂ.ಗೆ, ವೀರಚಕ್ರ ವಿಜೇತರಿಗೆ ಎಂಟು ಲಕ್ಷ ರೂ.ಗಳಿಂದ 50 ಲಕ್ಷ ರೂ.ಗೆ, ಶೌರ್ಯ ಚಕ್ರ ವಿಜೇತರಿಗೆ ಎಂಟು ಲಕ್ಷ ರೂ.ಗಳಿಂದ 50 ಲಕ್ಷ ರೂ.ಗೆ, ಸೇನಾ, ನೌಕಾ, ಹಾಗೂ ವಾಯು ಸೇನಾ ಮೆಡಲ್ ವಿಜೇತರಿಗೆ ಎರಡು ಲಕ್ಷ ರೂಗಳಿಂದ 15 ಲಕ್ಷ ರೂ. ಗಳಿಗೆ ಹಾಗೂ ಮೆನ್ ಶನ್ ಎನ್.ಡಿಎಸ್, ಪ್ಯಾಚ್ ರೂ. ಎರಡು ಲಕ್ಷದಿಂದ 15 ಲಕ್ಷ ರೂಗಳಿಗೆ ನಿಗದಿಪಡಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು. ರಾಜ್ಯ ಸರಕಾರವು ಯಾವಾಗಲೂ ಸೈನಿಕರ ಕಲ್ಯಾಣಕ್ಕೆ ಆದ್ಯತೇ ನೀಡುತ್ತಿದೆ. ನಿವೃತ್ತ ಯೋಧರು ಹಾಗೂ ಹುತಾತ್ಮರ ಕುಟುಂಬದ ಸದಸ್ಯರ ಕ್ಷೇಮಾಭಿವೃದ್ಧಿಗೆ ಬದ್ಧವಾಗಿದೆ ಎಂದರು.
ಕರ್ನಾಟಕ ಮತ್ತು ಕೇರಳ ಕ್ಷೇತ್ರದ ಜನರಲ್ ಕಮಾಂಡಿಂಗ್ ಆಫೀಸರ್ ಮೇಜರ್ ಜನರಲ್ ಜೆ.ವಿ.ಪ್ರಸಾದ, ಡಿಜಿಪಿ ಪ್ರವೀಣ ಸೂದ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕೂಡ ಯುದ್ಧ ಸ್ಮಾರಕಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.
ಶಾಸಕ ಅನೀಲ ಬೆನಕೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ಎಂ.ಎಲ್.ಐ.ಆರ್.ಸಿ. ಕಮಾಂಡಂಟ್ ಬ್ರಿಗೇಡಿಯರ್ ರೋಹಿತ್ ಚೌಧರಿ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಹಿರಿಯ ಸೇನಾಧಿಕಾರಿಗಳು, ನಿವೃತ್ತ ಯೋದರು, ಗಣ್ಯರು ಸೇರಿದಂತೆ ನೂರಾರು ಜನರು ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.