Belagavi News In Kannada | News Belgaum

ಸಹೋದರರೊಂದಿಗೆ ಚರ್ಚಿಸಿ ಬಿಜೆಪಿ ಸೇರ್ಪಡೆ ಬಗ್ಗೆ ತೀರ್ಮಾನ : ಲಖನ್ ಜಾರಕಿಹೊಳಿ

ಬೆಳಗಾವಿ :  ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಜೊತೆಗೆ ಚರ್ಚಿಸಿ, ಬಿಜೆಪಿಗೆ ಸೇರ್ಪಡೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ನೂತನ ವಿಧಾನ್ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಶನಿವಾರ  ಮಾತನಾಡಿ, ಬಿಜೆಪಿ ಅಭ್ಯರ್ಥಿ ಸೋಲಿಗೆ ರಮೇಶ್ ಜಾರಕಿಹೊಳಿ ಕಾರಣ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ  ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಕೆ.ಜಿ.ಎಫ್ ಬಾಬು ಹಾಗೂ ಹಾಸನದಲ್ಲಿ ಎ.ಮಂಜು ಅವರ ಪುತ್ರನ ಸೋಲಿಗೆ ಕಾರಣರಾದವರ ಮೇಲೆ ಯಾವಾಗ ಕ್ರಮ ಕೈಗೊಳ್ಳುತ್ತಿರಾ ಎಂಬುವುದನ್ನು ಸ್ಪಷ್ಟ ಪಡಿಸಬೇಕು ಎಂದಿದ್ದಾರೆ.

ಎಂಪಿ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಅವರು ಸಹೋದರ ಸತೀಶ್ ಜಾರಕಿಹೊಳಿ ವಿರುದ್ಧ ಕೆಲಸ ಮಾಡಿ, ಸೋಲಿಸಿದ್ದಾರೆ. ಅವರು ಬಿಜೆಪಿ ಪಕ್ಷಕ್ಕಾಗಿ ಕೆಲಸ ಮಾಡುತ್ತಾರೆ. ಬೆಳಗಾವಿಯಲ್ಲಿ 13 ಶಾಸಕರು, 2 ಸಂಸದರ ಇದ್ದಾರೆ. ರಮೇಶ್ ಗೆ ಯಾಕೆ ಮಾತ್ರ ಸೋಲಿನ ಹೊಣೆ ಎಂದು ಪ್ರಶ್ನೆ ಮಾಡಿದರು./////