Belagavi News In Kannada | News Belgaum

ನಾಡದ್ರೋಹಿ ಎಂಇಎಸ್ ನಿಷೇಧಿಸುವುದು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ವಿರೂಪಗೊಳಿಸಿರುವ ನಾಡ ದೇಶದ್ರೋಹಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಪ್ರತಿಭಟಿಸಿದರು.

ನಾಡದ್ರೋಹಿ ಎಂಇಎಸ್ ನಿಷೇಧಿಸುವುದು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ವಿರೂಪಗೊಳಿಸಿರುವ ನಾಡ ದೇಶದ್ರೋಹಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಕಾರ್ಯಕರ್ತರು ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು  ನಗರದ ಕನ್ನಡ ಸಾಹಿತ್ಯ ಭವನದಿಂದ ಚೆನ್ನಮ್ಮ ಸರ್ಕಲ್ ಸುತ್ತಲೂ ಪ್ರತಿಭಟಿಸಿದರು.


ಎಂಇಎಸ್ ಶಿವಸೇನೆಯ ಕಿಡಿಗೇಡಿಗಳು ಕೃತ್ಯಕ್ಕೆ ಧಿಕ್ಕಾರ ಪ್ರತಿಭಟನಾಕಾರರು ಕೂಗಲಾಯಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಧಿಕ್ಕಾರ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ಇದೇವೇಳೆ ಮಾತನಾಡಿದ ಜಿಲ್ಲಾ ಅಧ್ಯಕ್ಷ ಬಾಳಪ್ಪಾ ಗುಡಗೇನಟ್ಟಿ  ಮಾತನಾಡಿ ಬೆಳಗಾವಿ ಸೇರಿದಂತೆ ಗಡಿಭಾಗದಲ್ಲಿ ಎಂಇಎಸ್, ಶಿವಸೇನೆಯ ಗೂಂಡಾಗಿರಿ ವರ್ತನೆ ಹೆಚ್ಚಿದೆ. ಕನ್ನಡ ನಾಡಿನ ನೆಲ, ಜಲ ಸಕಲ ಸೌಲಭ್ಯಗಳನ್ನು ಬಳಸಿಕೊಂಡು ಕನ್ನಡಿಗರ ಮೇಲೆಯೇ ನಿರಂತರ ದೌರ್ಜನ್ಯ ನಡೆಸಿ ಅಶಾಂತಿ ಉಂಟು ಮಾಡುತ್ತಿವೆ. ಹಾಗಾಗಿ ಕೂಡಲೇ ಈ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಭಗ್ನಗೊಳಿಸಿರುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು. ಮಹಾಪುರುಷರ ಪ್ರತಿಮೆಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದು ಅನಿವಾರ್ಯ ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಪರಸಪ್ಪ ನಾಯಕ ದ್ಯಾಮಣ್ಣ ಕುರೆನ್ ವರ ಬೀಮರಾಯಿ ಬಿಜಿ ಸಂಘಟನೆಯ ಕಾರ್ಯಕರ್ತರು ಇದ್ದರು