Belagavi News In Kannada | News Belgaum

ಬೆಳಗಾವಿಯ ವಿಧಾನಸೌಧದಲ್ಲಿ ಎಂದು ಚರ್ಚಿಸಲು ಪಟ್ಟ ವಿಷಯಗಳು

ದಿನಾಂಕ: 21-12-2021
ರೈತರ ಬೆಳೆ ಪರಿಹಾರ ಧನದಲ್ಲಿ ಹೆಚ್ಚಳ:
-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

 

 

ಬೆಳಗಾವಿ, ಸುವರ್ಣಸೌಧ ಡಿ.20; ಅತಿವೃಷ್ಟಿಯಿಂದ ಹಾನಿಗೀಡಾಗುವ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿಂದು ತಿಳಿಸಿದರು.
ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಅವರು, ಪ್ರಸ್ತುತ ನೀರಾವರಿ ವ್ಯಾಪ್ತಿಯಲ್ಲಿ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್‍ಗೆ 13500 ರೂ. ನೀಡಲಾಗುತ್ತಿದೆ. ಇದಕ್ಕೆ ಹೆಚ್ಚುವರಿಯಾಗಿ 11500 ರೂ. ನೀಡಲು ನಿರ್ಧರಿಸಿದ್ದು, ಇದರಿಂದ ರೈತರಿಗೆ ಹೆಕ್ಟೇರ್‍ಗೆ 25500 ರೂ ದೊರೆಯಲಿದೆ. ಒಣ ಬೇಸಾಯ ಜಮೀನಿನಲ್ಲಿ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್‍ಗೆ 6800 ರೂ ನೀಡಲಾಗುತ್ತಿದ್ದು, ಹೆಚ್ಚುವರಿಯಾಗಿ ಇನ್ನೂ 6800 ರೂ. ನೀಡಲು ತೀರ್ಮಾನಿಸಲಾಗಿದೆ.
ಅತಿವೃಷ್ಟಿಯಿಂದ 12.69 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಬೆಳೆ ಹಾನಿ ಉಂಟಾಗಿದ್ದು ಪ್ರತಿಯೊಬ್ಬ ರೈತರ ಖಾತೆಗೆ ನೇರವಾಗಿ ಪರಿಹಾರ ಮೊತ್ತವನ್ನು ಜಮಾ ಮಾಡಲಾಗುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 1200 ಕೋಟಿ ರೂ. ಹೊರೆ ಉಂಟಾಗಲಿದೆ ಎಂದು ಅವರು ಹೇಳಿದರು.
ಇದೇ ರೀತಿ ಅತಿವೃಷ್ಟಿಯಿಂದ ಹಾನಿಗೀಡಾದ ತೋಟಗಾರಿಕಾ ಬೆಳೆಗಳಿಗೆ ಪ್ರಸ್ತುತ ಹೆಕ್ಟೇರ್‍ಗೆ 18 ಸಾವಿರ ರೂ. ಪರಿಹಾರ ನೀಡಲಾಗುತ್ತಿದ್ದು, ಇದಕ್ಕೆ ಹೆಚ್ಚುವರಿಯಾಗಿ 10ಸಾವಿರ ರೂ. ನೀಡಲು ನಿರ್ಧರಿಸಲಾಗಿದೆ ಎಂದರು.
ಬೆಳಗಾವಿ ವಿಭಾಗದಲ್ಲಿ 2019-20ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿ ಸಂಭವಿಸಿದ್ದು, ಪರಿಹಾರ ನೀಡಲು ಬಿಟ್ಟು ಹೋಗಿದ್ದ 7600 ಮನೆಗಳಿಗೆ ಪರಿಹಾರ ಒದಗಿಸಲು ಹೊಸದಾಗಿ ಅನುಮೋದನೆ ನೀಡಲಾಗಿದ್ದು, ಅನುದಾನವನ್ನು ಸಹ ಬಿಡುಗಡೆ ಮಾಡಲಾಗಿದೆ. ಪೂರ್ಣ ಹಾನಿಗೀಡಾಗಿದ್ದ 36698 ಮನೆಗಳ ಪೈಕಿ 18589 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, 7097 ಮನೆಗಳು ಬಹುತೇಕ ಪೂರ್ಣಗೊಂಡಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.////

 

ಕುಡಚಿ; 7 ಬಾಂದಾರಗಳ ನಿರ್ಮಾಣಕ್ಕೆ ಪ್ರಸ್ತಾವ; ಸಚಿವ ಜೆ.ಸಿ.ಮಾಧುಸ್ವಾಮಿ

 

ಬೆಳಗಾವಿ,ಸುವರ್ಣಸೌಧ. ಡಿ.21; ಬೆಳಗಾವಿ ಜಿಲ್ಲೆಯ ಕುಡಚಿ ಮತಕ್ಷೇತ್ರದಲ್ಲಿ 13.50 ಕೋಟಿ ರೂ.ವೆಚ್ಚದಲ್ಲಿ 7 ಸರಣ ಬಾಂದಾರ, ಚೆಕ್‍ಡ್ಯಾಮುಗಳನ್ನು ನಿರ್ಮಿಸುವ ಪ್ರಸ್ತಾವನೆ ಇದೆ. ಇದರಲ್ಲಿ 5 ಕೋಟಿ ರೂ.ವೆಚ್ಚದಲ್ಲಿ 2 ಸರಣ ಬಾಂದಾರುಗಳನ್ನು ನಿರ್ಮಿಸುವ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಕುಡಚಿ ಕ್ಷೇತ್ರದ ಶಾಸಕ ಪಿ.ರಾಜೀವ್ ಅವರ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ಕುಡಚಿ ಮತಕ್ಷೇತ್ರದಲ್ಲಿ ಸಣ್ಣ ನೀರಾವರಿ ಇಲಾಖೆಯ 4 ಕೆರೆಗಳಿವೆ. 2019-20 ರಲ್ಲಿ 80 ಲಕ್ಷ ರೂ.ವೆಚ್ಚದಲ್ಲಿ ಈ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ.13.50 ಕೋಟಿ ರೂ.ವೆಚ್ಚದಲ್ಲಿ 7 ಸರಣ ಬಾಂದಾರಗಳನ್ನು ನಿರ್ಮಿಸುವ ಪ್ರಸ್ತಾವ ಇದೆ. ಇವುಗಳಲ್ಲಿ 5 ಕೋಟಿ ರೂ.ವೆಚ್ಚದಲ್ಲಿ 2 ಸರಣ ಬಾಂದಾರಗಳನ್ನು ನಿರ್ಮಿಸಲು ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಬಾಕಿ ಉಳಿದ 5 ಕಾಮಗಾರಿಗಳನ್ನು ಅನುದಾನ ಲಭ್ಯತೆ ಆಧರಿಸಿ ಕೈಗೊಳ್ಳಲಾಗುವುದು ಎಂದರು./////

ಇಂಡಿ ಏತ ನೀರಾವರಿ ಯೋಜನೆ ಹೊಸ ಪಂಪ್‍ಗಳ ಖರೀದಿಗೆ ಟೆಂಡರ್
-ಸಚಿವ ಗೋವಿಂದ ಕಾರಜೋಳ

ಬೆಳಗಾವಿ,ಸುವರ್ಣಸೌಧ ಡಿ.21;ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಏತ ನೀರಾವರಿ ಯೋಜನೆಯ ಸವಕಳಿಗೊಂಡ ಹಾಗೂ ದುರಸ್ತಿ ಅಗತ್ಯವಿರುವ ಪಂಪ್‍ಗಳನ್ನು ಬದಲಿಸಿ, 10 ಕೋಟಿ ರೂ.ವೆಚ್ಚದಲ್ಲಿ 2 ಹೊಸ ಪಂಪ್‍ಗಳ ಅಳವಡಿಕೆಗಾಗಿ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹೇಳಿದರು.///

 

ಹಣಕಾಸು ಪರಿಸ್ಥಿತಿ ಅವಲೋಕಿಸಿ ಖಾಸಗಿ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

 

ಬೆಳಗಾವಿ.ಸುವರ್ಣ ಸೌಧ.ಡಿ.21: ರಾಜ್ಯದ ಹಣಕಾಸು ಪರಿಸ್ಥಿತಿ ಅವಲೋಕಿಸಿ 1995 ಕ್ಕೂ ಮುನ್ನ ಹಾಗೂ ನಂತರದ ಖಾಸಗಿ ಶಾಲೆಗಳನ್ನು ಸರ್ಕಾರದ ವೇತನಾನುಧನಕ್ಕೆ ಒಳಪಡಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬೆಳಗಾವಿ ಸುವರ್ಣ ಸೌಧ ಸಮಿತಿ ಸಭಾಂಗಣದಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ. ಎಸ್ . ಹೊರಟ್ಟಿ ಅಧ್ಯಕ್ಷತೆಯಲ್ಲಿ, ಜರುಗಿದ ಖಾಸಗಿ ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಕುರಿತಾದ ಸಭೆಯಲ್ಲಿ ಅವರು ಮಾತನಾಡಿದರು.
ಜನವರಿ 30 ರ ಒಳಗಾಗಿ 1995 ಕ್ಕೂ ಮುನ್ನ ಸ್ಥಾಪಿಸಿದ ಖಾಸಗಿ ಶಾಲೆಗಳನ್ನು ಸರ್ಕಾರದ ಸಹಾಯಧನಕ್ಕೆ ಒಳಪಡಿಸಲು ಹಣಕಾಸು ಇಲಾಖೆಗೆ ಸೂಕ್ತ ದಾಖಲೆ ಹಾಗೂ ಅಂಕೆ-ಸಂಖ್ಯೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಶಾಶ್ವತ ಅನುದಾನ ರಹಿತ ಖಾಸಗಿ ಶಾಲೆಗಳಿವೆ. ಹಣಕಾಸು ಪರಿಸ್ಥಿತಿ ಸುಧಾರಿಸಿದರೆ ಇವುಗಳಿಗೂ ಸಹ ಸಹಾಯಧನ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಅನುದಾನಿತ ಶಾಲೆಗಳ 500 ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಜಾಹಿರಾತು ನೀತಿ ನಿಯಮ ಪಾಲನೆಯಾಗಿಲ್ಲ ಎಂದು ಶಿಕ್ಷಣ ಇಲಾಖೆ ತಡೆ ಹಿಡಿದಿದೆ. ಶಾಲಾ ಆಡಳಿತ ಮಂಡಳಿ ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ ಒಂದೊಂದು ಪತ್ರಿಕೆಯಲ್ಲಿ ನೇಮಕಾತಿ ಕುರಿತು ಜಾಹಿರಾತು ನೀಡಿವೆ. ಆದರೆ ಪ್ರತಿಕೆಗಳ ರಾಜ್ಯಪುಟಗಳಲ್ಲಿವೇ ಜಾಹಿರಾತು ಪ್ರಕಟವಾಗಬೇಕು ಎಂದು ಅಧಿಕಾರಿಗಳು ಕಡ್ಡಾಯ ಮಾಡಿ ನೇಮಕಾತಿಗೆ ತಡೆ ನೀಡಿದ್ದಾರೆ. ಇದನ್ನು ತಕ್ಷಣವೇ ಸರಿಪಡಿಸಬೇಕು ಎಂದು ಸಭಾಪತಿ ಬಸವಾರಾಜ ಹೊರಟ್ಟಿ ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಸಭಾಪತಿಗಳ ಮಾತಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪತ್ರಿಕೆಗಳಲ್ಲಿ ನೇಮಕಾತಿ ಜಾಹಿರಾತು ನೀಡಿರುವ ಶಾಲಾ ಆಡಳಿತ ಮಂಡಳಿಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಯಲು ಅನುಮತಿ ನೀಡಿ. ಇಂತಹದೇ ಪುಟದಲ್ಲಿ ಜಾಹಿರಾತು ಬರಬೇಕು ಎಂಬ ನಿಯಮವಿಲ್ಲ. ಯಾವುದೇ ಪುಟದಲ್ಲಿ ಜಾಹಿರಾತು ಪ್ರಕಟಗೊಂಡರು ಅದನ್ನು ಪರಿಗಣ ಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಶಾಲಾ ಕಟ್ಟಡಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿ ಪ್ರಮಾಣ ಪತ್ರ ಪಡೆಯುವ ನಿಯಮಗಳನ್ನು ಸರಳಗೊಳಿಸಿ. ಶೈಕ್ಷಣ ಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಶಿಕ್ಷಣ ಸಂಸ್ಥೆಗಳಿಂದ ಇಂಡೆಮ್ನಿಟಿ ಬಾಂಡ್(ನಷ್ಟ ಪರಿಹಾರ) ಪಡೆದು ಶಾಲೆಗಳಿಗೆ ಮಾನ್ಯತೆ ನೀಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
150 ಜನ ಸಿಬ್ಬಂದಿ ಖಾಯಂಮಾತಿ ಕ್ರಮ: ಶಿಕ್ಷಣ ಇಲಾಖೆಯಲ್ಲಿ 1997-98 ನೇ ಸಾಲಿನಲ್ಲಿ ಗುತ್ತಿಗೆ ಆಧಾರದ ಮೇಲೆ ಡಿ.ಪಿ.ಇ.ಪಿ.ಯೋಜನೆಯಡಿ ನೇಮಕಗೊಂಡ 150 ಜನ ಸಿಬ್ಬಂದಿಯನ್ನು ಸಕ್ರಮಗೊಳಿಸುವ ಕುರಿತಂತೆ ಕಾನೂನಾತ್ಮಕ ವಿಷಯಗಳನ್ನು ಪರಿಶೀಲಿಸಿ ಖಾಯಂಮಾತಿಗೆ ಕ್ರಮಕೈಗೊಳ್ಳುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಎನ್.ಪಿ.ಎಸ್. ಯೋಜನೆಯಡಿ ಖಾಸಗಿ ಶಾಲಾ ಶಿಕ್ಷಕರು: ರಾಷ್ಟ್ರೀಯ ಪಿಂಚಣ ಯೋಜನೆಯಲ್ಲಿ ಖಾಸಗಿ ವ್ಯಕ್ತಿಗಳು ಸಹ ಪ್ರಾನ್ ಖಾತೆ ತೆರೆದು ಉಳಿತಾಯ ಮಾಡಬಹುದು. ಖಾಸಗಿ ಶಾಲಾ ಶಿಕ್ಷಕರನ್ನು ಸಹ ಎನ್.ಪಿ.ಎಸ್.ಯೋಜನೆಯಡಿ ತರಬೇಕು. ಶಾಲಾ ಆಡಳಿತ ಮಂಡಳಿಗಳು ಉದ್ಯೋಗಿಯ ವೇತನದಲ್ಲಿ ಶೇ.10 ರಷ್ಟು ಹಣವನ್ನು ಕಟಾಯಿಸಿ, ಇದಕ್ಕೆ ಆಡಳಿತ ಮಂಡಳಿಯಿಂದ ಶೇ.10 ರಷ್ಟು ಹಣವನ್ನು ತುಂಬಬೇಕು. ಈ ಕುರಿತು ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ತಿಳಿಸಿದರು.
ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಎನ್.ಎಸ್.ಪ್ರಸಾದ್, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.////

 

ಬೆಳೆ ಹಾನಿ
14ಲಕ್ಷ ರೈತರಿಗೆ 926 ಕೋಟಿ ರೂ. ಪರಿಹಾರ ಬಿಡುಗಡೆ:
ಸಚಿವ ಆರ್.ಅಶೋಕ್

ಬೆಳಗಾವಿ, ಸುವರ್ಣಸೌದ ಡಿ .21; ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾದ 14 ಲಕ್ಷ ರೈತರ ಖಾತೆಗೆ 926.43 ಕೋಟಿ ರೂ.ಪರಿಹಾರ ಧನವನ್ನು ತಿಂಗಳ ಒಳಗಾಗಿ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ವಿಧಾನಸಭೆಯಲ್ಲಿಂದು ತಿಳಿಸಿದರು.
ಸದನದಲ್ಲಿ ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿದ ಸಚಿವರು, ಅತಿವೃಷ್ಟಿಯಿಂದ 12.52 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಬೆಳೆ ಹಾನಿ ಸಂಭವಿಸಿದ್ದು, ತಕ್ಷಣ ಜಂಟಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ ಪರಿಹಾರವನ್ನು ಒದಗಿಸಲಾಗಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಮೊದಲ ಬಾರಿ 841.57 ಕೋಟಿ ರೂ. ಮತ್ತು ಎರಡನೇ ಬಾರಿ 128.92 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಎರಡು ಬಾರಿ ಕೇಂದ್ರ ತಂಡ ಆಗಮಿಸಿ ಸಮೀಕ್ಷೆ ಕಾರ್ಯ ನಡೆಸಿದೆ ಎಂದು ಹೇಳಿದರು.
ಅತಿವೃಷ್ಟಿಯಿಂದ 23,716 ಮನೆಗಳಿಗೆ ಹಾನಿ ಸಂಭವಿಸಿದ್ದು, 332.87 ಕೋಟಿ ರೂ. ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ಸಂಪೂರ್ಣ ಹಾನಿಗೀಡಾದ ಮನೆಗಳಿಗೆ 5ಲಕ್ಷ ರೂ, ತೀವ್ರ ಹಾನಿಗೀಡಾದ ಮನೆಗಳಿಗೆ 3ಲಕ್ಷ ರೂ. ಹಾಗೂ ಭಾಗಶಃ ಹಾನಿಗೀಡಾದ ಮನೆಗಳಿಗೆ 50ಸಾವಿರ ರೂ. ಪರಿಹಾರ ಒದಗಿಸಲಾಗುತ್ತಿದೆ.
ಕೊಡಗಿನಲ್ಲಿ ಹಾನಿಗೀಡಾದ ಕಾಫಿ ಬೆಳೆಗೆ ಪ್ರತಿ ಹೆಕ್ಟೇರ್‍ಗೆ 18ಸಾವಿರ ರೂ.ನಂತೆ ಒಟ್ಟು 38.80ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಅತಿವೃಷ್ಟಿಯಿಂದ 62 ಜೀವ ಹಾನಿ ಸಂಭವಿಸಿದ್ದು, 945 ಜಾನುವಾರುಗಳು ಸಾವಿಗೀಡಾಗಿವೆ. 54,716 ಮನೆ, 3306 ಸೇತುವೆಗಳಿಗೆ, 995 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ. ರಾಜ್ಯ ಸರ್ಕಾರ ತಕ್ಷಣ ಸಂತ್ರಸ್ತರ ನೆರವಿಗೆ ಧಾವಿಸಿ ಪರಿಹಾರವನ್ನು ಪ್ರಾಮಾಣ ಕವಾಗಿ ಒದಗಿಸಿದೆ. ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಉತ್ತಮ ಊಟ ಉಪಾಹಾರದ ವ್ಯವಸ್ಥೆಯನ್ನು ಸರ್ಕಾರ ಸ್ಥಳೀಯವಾಗಿ ಕೈಗೊಂಡಿದೆ ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರ 15ನೇ ಹಣಕಾಸು ಯೋಜನೆಯಡಿ 5270 ಕೋಟಿ ರೂ. ಬಿಡುಗಡೆ ಮಾಡುತ್ತಿದೆ. ಹೆಚ್ಚಿನ ಪರಿಹಾರ ಕೋರಿ ಮುಖ್ಯಮಂತ್ರಿ ಅವರು ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ ಎಂದು ಸಚಿವರು ತಿಳಿಸಿದರು.//////

 

 

ಏಡ್ಸ್ ಕುರಿತು ಜಾಗೃತಿ ಅವಶ್ಯಕ: ಸಚಿವ ಡಾ ಕೆ. ಸುಧಾಕರ್

ಬೆಳಗಾವಿ, ಡಿ.18 : “ಅಸಮಾನತೆಗಳನ್ನು ಕೊನೆಗೊಳಿಸಿ, ಏಡ್ಸ್ ಅನ್ನು ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ”- ಎಂಬ ಘೋಷವಾಕ್ಯದ ಸಂಕಲ್ಪದೊಂದಿಗೆ ಈ ವರ್ಷ ನಾವು ವಿಶ್ವ ಏಡ್ಸ್ ದಿನವನ್ನು ಆಚರಿಸುತ್ತಿದ್ದೇವೆ. ಇದರ ಮೂಲ ಉದ್ದೇಶ ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ. ಸುಧಾಕರ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನಶನ್ ಸೊಸೈಟಿ ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕ, ವಾರ್ತಾ ಮತ್ತು ಪ್ರಚಾರ ಇಲಾಖೆ ಮತ್ತು ಇತರ ಸರಕಾರಿ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ(ಡಿ.21) ರಂದು ಕೆ.ಎಲ್.ಇ. ಸಂಸ್ಥೆಯ ಜೀರಿಗೆ ಸಭಾಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಏಡ್ಸ್ ದಿನ -2021 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಟ್ರಕ್ ಡ್ರೈವರ್ ನಂತಹ ಹಲವಾರು ಕೆಲಸದಲ್ಲಿ ತೊಡಗಿಕೊಂಡು ಮನೆಯಿಂದ ದೂರವಿರುವ ಕಾರಣದಿಂದ ಮತ್ತು ಈ ರೋಗವು ಹೆಚ್ಚಾಗಿ ರಕ್ತದಿಂದ ಅಥವಾ ಲೈಂಗಿಕ ಕ್ರಿಯೆಯಿಂದ ಹರಡುತ್ತಿದ್ದು, ಅಂತಹ ವ್ಯಕ್ತಿಗಳಿಗೆ ತರಬೇತಿಯನ್ನು ನೀಡುವ ಕೆಲಸ ಕೆಸ್ಯಾಪ್ಸ್ ಸೊಸೈಟಿಯು ಮಾಡುತ್ತಿದ್ದು, ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು.
2010 ರ ವೇಳೆಯಲ್ಲಿ ಮಹಾರಾಷ್ಟ್ರ, ತಮಿಳುನಾಡು, ಚೈನ್ಯ, ಕೇರಳದಂತಹ ರಾಜ್ಯಗಳಲ್ಲಿ ಏಡ್ಸ್ ಪಿಡಿತರ ಸಂಖ್ಯೆಯು ಹೆಚ್ಚಾಗಿ ಕಂಡು ಬಂದಿತ್ತು. ಏಡ್ಸ್ ನಂತಹ ಸಾಂಕ್ರಾಮಿಕ ರೋಗವನ್ನು ವಿರೋಧಿಸಬೇಕೆ ವಿನಃ ಸಾಂಕ್ರಾಮಿಕ ರೋಗಿಗಳಿಗೆ ಅಲ್ಲ, ಅಂತಹ ರೋಗಿಗಳಿಗೆ ಮನೋಸ್ಥೈರ್ಯವನ್ನು ತುಂಬಬೇಕು. ನೈತಿಕ ಬೆಂಬಲ ಮತ್ತು ನೈತಿಕ ಸ್ಪೂರ್ತಿಯಿಂದ ಮಾತ್ರ ಇಂತಹ ಸಾಮಾಜಿಕ ಪಿಡುಗನ್ನು ಹೋಗಲಾಡಿಸಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ ಸುಧಾಕರ್ ಹೇಳಿದರು.

ಎ.ಆರ್ .ಟಿ ಚಿಕಿತ್ಸೆ ಪಡೆಯುವಂತೆ ಸೂಚನೆ :
ಎ.ಆರ್ ಟಿ ಚಿಕಿತ್ಸೆಗೆ ಮೂಲಕ ಸೊಂಕು ನಿಯಂತ್ರಿಸಬಹುದು. ಚಿಕಿತ್ಸೆಯ ಜೊತೆಗೆ ರೋಗಿಗೆ ಸಮಾಜದಿಂದ ನೈತಿಕ ಸ್ಫೂರ್ತಿ ಕೂಡ ಅತಿ ಮುಖ್ಯ ಎಂದು ಹೇಳಿದರು.

ರಾಜ್ಯದಲ್ಲಿ ಪ್ರಸ್ತುತ ಒಂದು ಲಕ್ಷ ಜನ ಏಡ್ಸ್ ಪೀಡಿತರಿದ್ದಾರೆ. ಅವರಲ್ಲಿ 70 ಪ್ರತಿಶತ ಜನರು ಎಆರ್ ಟಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶೇ. 30ರಷ್ಟು ಜನರಲ್ಲಿ ಜಾಗೃತಿಯ ಕೊರತೆ ಇದೆ ಅದನ್ನು ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಬರುವ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಆಯುಷ್ಮಾನ್ ಭಾರತ ಆರೋಗ್ಯ ವಿಮೆ:
ಆಯುಷ್ಮಾನ್ ಭಾರತ ಆರೋಗ್ಯ ವಿಮೆ ಜಗತ್ತಿನಲ್ಲಿ ಅತಿ ದೊಡ್ಡ ವಿಮೆ ಯೋಜನೆಯಾಗಿದೆ. ಪ್ರತಿ ಕುಟುಂಬವು 5 ಲಕ್ಷದವರೆಗೂ ಉಚಿತ ಚಿಕಿತ್ಸೆ ತೆಗೆದುಕೊಳ್ಳಬಹುದು. ಯಾವುದೇ ಒಂದು ಮಾಸಿಕ ವೆಚ್ಚ(ಪ್ರಿಮಿಯಂ) ಭರಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು. ಈ ಯೋಜನೆಯನ್ನು ಪ್ರತಿಯೊಬ್ಬರಿಗೆ ತಲುಪಿಸುವ ಗುರಿಯನ್ನು ಹೊಂದಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಎಲ್ಲರಿಗೂ ಆರೋಗ್ಯ ಸೇವೆಯನ್ನು ಒದಗಿಸಲು ಸರಕಾರ ಕ್ರಮ ಕೈಗೊಳ್ಳಲಿದೆ.
ಗಡಿ ಜಿಲ್ಲೆ ಬೆಳಗಾವಿಗೆ ವಿಶೇಷ ಒತ್ತು:
ನೆರೆಯ ರಾಜ್ಯದ ಜನರು ಆಗಮಿಸುವುದರಿಂದ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಅಗತ್ಯವಿರುತ್ತದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಬೆಳಗಾವಿ ಸೇರಿದಂತೆ ಗಡಿ ಜಿಲ್ಲೆಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಅನಿಲ್ ಬೆನಕೆ, ಬೆಳಗಾವಿ ಜಿಲ್ಲೆಯಲ್ಲಿ ಎಚ್.ಐ.ವಿ.-ಏಡ್ಸ್ ನಿಯಂತ್ರಣಕ್ಕಾಗಿ ಹಾಗೂ ಜಾಗೃತಿಮೂಡಿಸಲು 4-5 ರಂದು ಸರಕಾರೇತರ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಸದರಿ ಸಂಸ್ಥೆಗಳಿಗೆ ಯಾವುದೇ ರೀತಿಯ ಸೌಲಭ್ಯಗಳು ಇದುವರೆಗೂ ದೊರೆಯುತ್ತಿಲ್ಲ. ಈ ರೀತಿಯ ಕೇಂದ್ರಗಳು ನಡೆಸಲು ಯಾವುದೇ ಸ್ವಂತಃ ಸ್ಥಳ ಇಲ್ಲವಾಗಿದೆ. ಆದ್ದರಿಂದ ಎನ್.ಜಿ.ಓ. ಗಳಿಗೆ ಅನುದಾನ ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ಬೀಮ್ಸನಲ್ಲಿ ಪ್ರತಿ ವರ್ಷ 100 ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಮಾಡಿ ಕೊಡುತ್ತಿದ್ದು, ಸಿಬ್ಬಂದಿಯ ಕೊರತೆಯ ಹಾಗೂ ಇನ್ನಿತರ ಕಾರಣಗಳಿಂದ ಅದನ್ನು 60 ಸೀಟುಗಳಿಗೆ ಇಳಿಸಲು ಪ್ರಸ್ತಾಪ ಮಾಡಲಾಗಿದೆ ಇರುವ ಕೊರತೆಗಳನ್ನು ನಿಗಿಸಿ 100 ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಸಚಿವ ಡಾ.ಕೆ. ಸುಧಾಕರ್ ಅವರಿಗೆ ಮನವಿ ಮಾಡಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ವೈದ್ಯಕೀಯ ಅಧಿಕಾರಿಗಳಿಗೆ ಸನ್ಮಾನ ಮಾಡಲಾಯಿತು. ಇದೇ ಸಂದಭರ್ದಲ್ಲಿ ಏಡ್ಸ್ ಜಾಗೃತಿಯ ಮೂಡಿಸಲು ಹಾಗೂ ಆಯುಷ್ಮಾನ್ ಯೋಜನೆಯ ಪ್ರಚಾರಸಾಮಗ್ರಿ ಹಾಗೂ ಭಿತ್ತಿತ್ರಗಳನ್ನು ಸಚಿವ ಡಾ.ಕೆ.ಸುಧಾಕರ್ ಬಿಡುಗಡೆ ಮಾಡಿದರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ಯೋಜನಾ ನಿರ್ದೇಶಕರಾದ ಡಾ. ಕೆ.ಲೀಲಾವತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದರ್ಶನ್ ಎಚ್ ವಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೆಶಕರಾದ ಡಾ. ಅಪ್ಪಾಸಾಹೇಬ ನರಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿಗಳಾದ ಡಾ.ಎಸ್.ವಿ ಮುನ್ಯಾಳ ಮತ್ತಿತರರು ಉಪಸ್ಥಿತರಿದ್ದರು.////

 

23 ರಂದು ಉದ್ಯೋಗ ಮೇಳ

ಬೆಳಗಾವಿ, ಡಿ.18  ವಾರ್ರ್ಟಕ ಸರ್ಕಾರ, ಕೌಶಾಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ ಬೆಂಗಳೂರು ವತಿಯಿಂದ ಡಿಸೆಂಬರ್ 23 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗಾವಿಯ ಉದ್ಯಮಬಾಗನ ಕೆ.ಎಲ್.ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ “ಎಲ್ಲರಿಗೂ ಉದ್ಯೋಗ”(ಎob ಜಿoಡಿ ಚಿಟಟ) ಎಂಬ ಧ್ಯೇಯ ವ್ಯಾಕ್ಯದಡಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ವಿಶೇóಷವಾಗಿ ಐ.ಟಿ.ಐ, ಡಿಪ್ಲೋಮಾ ಹಾಗೂ ಇಂಜನಿಯರರಿಂಗ್ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಉದ್ಯೋಗಾವಕಾಶವು ಉಚಿತವಾಗಿರುತ್ತದೆ.
ಸದರಿ ಮೇಳದಲ್ಲಿ 50 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಹಾಗೂ ಆಸಕ್ತ ಆಭ್ಯರ್ಥಿಗಳ

https:skillconnect.kaushalkar.com/app/jobfair

ಈ ವೆಬ್ ಸೈಟ್ ನಲ್ಲಿ ನೊಂದಾಯಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8277895931 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗ ಮೇಳ ನಡೆಯುವ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು.///

ಬಿಬಿಎಂಪಿ ವ್ಯಾಪ್ತಿಯಲ್ಲಿ ಫಾಗಿಂಗ್: ಶೀಘ್ರ ಟೆಂಡರ್
-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ, ಸುವರ್ಣಸೌದ 21; ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಧೂಮೀಕರಣ (ಫಾಗಿಂಗ್) ಕೈಗೊಳ್ಳಲು ಎಲ್ಲಾ ವಲಯಗಳಲ್ಲಿ ಶೀಘ್ರವೇ ಟೆಂಡರ್ ಕರೆದು ಕ್ರಮವಹಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿಂದು ಶೂನ್ಯ ವೇಳೆಯಲ್ಲಿ ಸದಸ್ಯ ಯು.ಬಿ. ವೆಂಕಟೇಶ್ ಅವರು ಗಮನ ಸೆಳೆದ ವಿಷಯಕ್ಕೆ ಉತ್ತರ ನೀಡಿರುವ ಮುಖ್ಯಮಂತ್ರಿಗಳು ಮಾಧ್ಯಮದಲ್ಲಿ ಬಿತ್ತರವಾದ ವರದಿ ಕುರಿತಂತೆ ಎಲ್ಲಾ ವಲಯಗಳ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಯಲಹಂಕ ವಲಯದಲ್ಲಿ ಟೆಂಡರ್ ಮೂಲಕ ಸೊಳ್ಳೆ ನಿಯಂತ್ರಣ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ರಾಜರಾಜೇಶ್ವರಿ ನಗರದಲ್ಲಿ ಟೆಂಡರ್ ಕರೆಯಲು ಅನುಮೋದನೆಗಾಗಿ ಕಡತ ಸಲ್ಲಿಸಲಾಗಿದೆ. ಉಳಿದ ವಲಯಗಳಲ್ಲಿ ವಾರ್ಡುವಾರು ಕೊಟೇಷನ್ ಮುಖಾಂತರ ಕಾರ್ಯಾದೇಶ ನೀಡಿ ಸೊಳ್ಳೆ ನಿಯಂತ್ರಣ ಕಾರ್ಯನಿರ್ವಹಿಸಲಾಗುತ್ತದೆ. ಎಲ್ಲಾ ವಲಯಗಳಿಗೆ ಕೆಟಿಪಿಪಿ ನಿಯಮಾನುಸಾರ ಟೆಂಡರ್ ಮೂಲಕ ಫಾಗಿಂಗ್ ಕೈಗೊಳ್ಳಲು ಟೆಂಡರ್ ಸಿದ್ಧತಾ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರವೇ ಟೆಂಡರ್ ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ.//

ಎಸ್.ಟಿ.ಗೆ ಕಾಡುಗೊಲ್ಲರ ಸೇರ್ಪಡೆ: ಕೇಂದ್ರಕ್ಕೆ ಶೀಘ್ರ ಸ್ಪಷ್ಟನೆ
-ಸಚಿವ ಜೆ.ಸಿ.ಮಾಧುಸ್ವಾಮಿ

ಬೆಳಗಾವಿ, ಸುವರ್ಣಸೌಧ .21; ಹಿಂದುಳಿದ ಬುಡಕಟ್ಟಿಗೆ ಸೇರಿರುವ ಅನಕ್ಷರತೆ, ಪಶುಪಾಲನೆ ವೃತ್ತಿನಿರತರಾಗಿರುವ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಠ ಪಂಗಡ (ಎಸ್.ಟಿ)ಕ್ಕೆ ಸೇರಿಸಲು ಕೇಂದ್ರ ಸರ್ಕಾರ ಕೆಲವು ಸ್ಪಷ್ಟನೆಗಳನ್ನು ಕೇಳಿ ಪತ್ರ ಬರೆದಿದೆ.ಕುಲಶಾಸ್ತ್ರೀಯ ಅಧ್ಯಯನ ಮಾಡಿರುವ ತಜ್ಞರ ಮೂಲಕ ಮಾಹಿತಿ ಪಡೆದು ಕೇಂದ್ರಕ್ಕೆ ಶೀಘ್ರ ಸ್ಪಷ್ಟನೆಗಳನ್ನು ಕಳುಹಿಸಲಾಗುವುದು.ಕಾಡುಗೊಲ್ಲರ ಹಿತರಕ್ಷಣೆ ಹಾಗೂ ಪೂರ್ಣ ಪ್ರಮಾಣದ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರ ಕಂಕಣಬದ್ಧವಾಗಿದೆ ಎಂದು ಕಾನೂನು,ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಹೇಳಿದರು.
ವಿಧಾನಸಭೆಯಲ್ಲಿಂದು ನಿಯಮ 69ರಡಿ ಶಾಸಕರಾದ ಪೂಣ ್ಮಾ, ಕೆ.ಎಂ. ಶಿವಲಿಂಗೇಗೌಡ ಅವರು ನಡೆಸಿದ ಚರ್ಚೆಗೆ ಉತ್ತರ ಒದಗಿಸಿ ಮಾತನಾಡಿದರು.
ಕಾಡುಗೊಲ್ಲರನ್ನು ಎಸ್.ಟಿ. ವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸಿ 2010 ರಿಂದಲೂ ಹೋರಾಟ ನಡೆಯುತ್ತಿದೆ. ಮೈಸೂರು ವಿಶ್ವವಿದ್ಯಾಲಯದ ಮಾನವಶಾಸ್ತ್ರ ಅಧ್ಯಯನ ವಿಭಾಗದ ಡಾ. ಅನ್ನಪೂರ್ಣಮ್ಮ ಅವರ ನೇತೃತ್ವದಲ್ಲಿ ಕುಲಶಾಸ್ತ್ರೀಯ ಅಧ್ಯಯನ ಮಾಡಿ ಈ ಹಿಂದೆ 2014 ರಲ್ಲಿ ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಬಹಳ ದೀರ್ಘ ಅವಧಿಯ ನಂತರ ಇತ್ತೀಚೆಗೆ ಕೇಂದ್ರ ಸರ್ಕಾರವು ಪತ್ರ ಬರೆದು ಧಾರ್ಮಿಕ ಮತ್ತು ವೈವಾಹಿಕ ಆಚರಣೆಗಳಲ್ಲಿ ಈ ಸಮುದಾಯವು ಹಿಂದೂ ಧರ್ಮಕ್ಕೆ ಹೋಲುವ ಆಚರಣೆಗಳನ್ನು ರೂಢಿಸಿಕೊಂಡಿದೆ ಎಂದು ತಿಳಿಸಿದೆ. ಇದೀಗ ಮತ್ತೆ ತಜ್ಞರ ಸಮಿತಿಯ ಮೂಲಕ ಕಾಡುಗೊಲ್ಲರು ಹಿಂದೂಗಳಿಗಿಂತ ಎಲ್ಲ ಆಚರಣೆಗಲ್ಲಿ ಶೇ. ನೂರಕ್ಕೆ ನೂರರಷ್ಟು ಭಿನ್ನರಾಗಿದ್ದಾರೆ. ರೂಢಿಗಳು, ಆಚರಣೆಗಳಲ್ಲಿ ಬುಡಕಟ್ಟು ಸಂಸ್ಕøತಿಯಿದೆ. ಪತಿ ಮರಣ ಹೊಂದಿದರೂ ಸಹ ಮಹಿಳೆಯ ಬಳೆ ಒಡೆಯುವ, ಕುಂಕುಮ ಅಳಿಸಿ ವಿಧವೆ ಮಾಡುವ ಪದ್ಧತಿ ಇಲ್ಲದ ಏಕೈಕ ಸಮಾಜ ಕಾಡುಗೊಲ್ಲ ಜನಾಂಗವಾಗಿದೆ. ಸುಲಭವಾಗಿ ಬೆಂಕಿ, ಬಿಸಿಲು ಬೀಳದಿರುವ ಜಾಗೆಯಲ್ಲಿ ಅವರ ವಾಸಸ್ಥಳಗಳಿರುತ್ತವೆ. ಸಂಪೂರ್ಣವಾಗಿ ಕುರಿ ಕಾಯುವ ವೃತ್ತಿಯನ್ನೇ ಈ ಸಮುದಾಯ ಅವಲಂಬಿಸಿದೆ. ಈ ಎಲ್ಲ ಅಂಶಗಳನ್ನು ಆಧರಿಸಿ ತಜ್ಞರ ಮೂಲಕ ವರದಿ ಪಡೆದು ಶೀಘ್ರದಲ್ಲಿಯೇ ಕೇಂದ್ರ ಸರ್ಕಾರದ ಸಂಬಂಧಿಸಿದ ರಿಜಿಸ್ಟ್ರಾರ್ ಜನರಲ್ ಅವರಿಗೆ ಸ್ಪಷ್ಟನೆ ನಿಡಲಾಗುವುದು. ಎಲ್ಲೂ ನೆಲೆಯಿಲ್ಲದ ಈ ಸಮುದಾಯದ ಜೊತೆಗೆ ಸರ್ಕಾರವಿದೆ. ಸಮಾಜಕ್ಕೆ ಒಳ್ಳೆಯದನ್ನು ಮಾಡಲು ಸರ್ಕಾರ ಬದ್ಧವಾಗಿದೆ.ವಸತಿ ಸಚಿವರಾದ ವಿ.ಸೋಮಣ್ಣನವರು ವಿಶೇಷ ಕಾಳಜಿವಹಿಸಿ ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಕಾಡುಗೊಲ್ಲರಿಗೆ ಸುಮಾರು 20 ಸಾವಿರಕ್ಕೂ ಅಧಿಕ ಮನೆಗಳನ್ನು ಒದಗಿಸಿದ್ದಾರೆ.ಗೊಲ್ಲರಹಟ್ಟಿಗಳಿಗೆ ಕುಡಿಯುವ ನೀರು,ರಸ್ತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿ ಕೂಡಲೇ ಪೂರ್ಣ ಪ್ರಮಾಣದ ನಿಗಮ ಸ್ಥಾಪಿಸಲಾಗುವುದು ಎಂದರು.
ಇದಕ್ಕೂ ಮುನ್ನ ಶಾಸಕಿ ಕೆ.ಪೂಣ ್ಮಾ,ಕೆ.ಎಂ.ಶಿವಲಿಂಗೇಗೌಡ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಡುಗೊಲ್ಲ ಸಮುದಾಯದ ಸಾಮಾಜಿಕ ಸ್ಥಿತಿಗತಿಗಳನ್ನು ಸದನಕ್ಕೆ ವಿವರಿಸಿದರು.///