Belagavi News In Kannada | News Belgaum

‘ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ’ ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಮಹಾವೀರ ನಿಲಜಗಿ

ಹುಕ್ಕೇರಿ : ಪಟ್ಟಣದ ಪ್ರತಿಷ್ಠಿತ ಮಹಾವೀರ ಶಿಕ್ಷಣ ಸಂಸ್ಥೆ ಅಧ್ಯಕ್ಷ, ಪುರಸಭೆ ಹಿರಿಯ ಸದಸ್ಯ ಮಹಾವೀರ ನಿಲಜಗಿ ಅವರಿಗೆ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕದ 2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕರ್ನಾಟಕ ಮಾಧ್ಯಮ ಸಹಕಾರದೊಂದಿಗೆ ಬೆಂಗಳೂರಿನ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಮಹಾವೀರ ನಿಲಜಗಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಹಕಾರ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹಾವೀರ ನಿಲಜಗಿ ಅವರು ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ನಟಿ ಶೃತಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತೆ ಜೋಗುತಿ ಮಂಜಮ್ಮ, ಸ್ವರ್ಣ ಗೋಲ್ಡ್ ಪ್ಯಾಲೇಸ್ ಮಾಲೀಕ ಟಿ.ಎ.ಸರವನ್, ಮಂಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರನ್, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಕೃಷ್ಣಭಟ್, ವೈದೇಹಿ ವೈದ್ಯಕೀಯ ಮಹಾವಿದ್ಯಾಲಯ ಅಧ್ಯಕ್ಷ ಶ್ರೀಮತಿ ಡಿ.ಜೆ.ಕಲ್ಪನಾ, ಸ್ವಾಮಿ ವಿವೇಕಾನಂದ ಶಾಲೆ ಸಂಸ್ಥಾಪಕ ಅಶೋಕ ಪಾಟೀಲ, ಮಹಾವೀರ ಸಹಕಾರಿ ನಿರ್ದೇಶಕರಾದ ರೋಹಿತ್ ಚೌಗಲಾ, ಬಾಹುಬಲಿ ಸೊಲ್ಲಾಪುರೆ, ಸಂಜಯ ನಿಲಜಗಿ, ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ಮಹಾವೀರ ನಿಲಜಗಿಯವರು ಮಹಾವೀರ ಮಲ್ಟಿಪರಪಜ್ ಸೌಹಾರ್ಧ ಸಹಕಾರಿ ನಿಯಮಿತ ಸಂಸ್ಥೆ, ಮಹಾವೀರ ಶಿಕ್ಷಣ ಸಂಸ್ಥೆ ಹಾಗೂ ಮಹಾವೀರ ಉದ್ಯೋಗ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತ ನೂರಾರು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿ ಆಶಾಕಿರಣವಾಗಿದ್ದಾರೆ. ಜತೆಗೆ ಪುರಸಭೆಗೆ ದಶಕಕ್ಕೂ ಹೆಚ್ಚು ಅವಧಿಯವರೆಗೆ ಸದಸ್ಯರಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನು ಮಹಾಮಾರಿ ಕೊರೋನಾ ಅಲೆ ಹಾಗೂ ಪ್ರವಾಹದ ಸಂದರ್ಭದಲ್ಲಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಾಕಷ್ಟು ನೆರವಿನ ಸಹಾಯಹಸ್ತ ಚಾಚಿದ್ದಾರೆ./////