Belagavi News In Kannada | News Belgaum

ಡಿವೈಡರ್ ಗೆ ಮಿನಿಬಸ್ ಡಿಕ್ಕಿ : ಇಬ್ಬರು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ

ಮುಧೋಳ :  ಡಿವೈಡರ್ ಗೆ ಮಿನಿಬಸ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಹೊರವಲಯದ ಮುಧೋಳ-ವಿಜಯಪುರ ರಸ್ತೆಯಲ್ಲಿ ಅಪಘಾತ ನಡೆದಿದೆ. ಮೃತರು ಬಾದಾಮಿ ತಾಲ್ಲೂಕಿನ ಮುಷ್ಟಿಗೇರಿ ಗ್ರಾಮದವರು ಎಂದು ತಿಳಿದು ಬಂದಿದೆ.

ನಿಶ್ಚಿತಾರ್ಥ ಸಮಾರಂಭಕ್ಕೆಂದು ಮಿನಿಬಸ್ ಮೂಲಕ ತೇರದಾಳ ಪಟ್ಟಣಕ್ಕೆ ತೆರಳಿದ್ದರು. ಅಲ್ಲಿಂದ ಮರಳುವಾಗ ಈ ದುರ್ಘಟನೆ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗೊಂಡಿದ್ದು, ಮುಧೋಳ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮುಧೋಳ ಪೊಲೀಸರು ಭೇಟಿ ಮಾಡಿ, ಪರಿಶೀಲನೆ ನಡೆಸಿದ್ದಾರೆ ಪ್ರಕರಣ ದಾಖಲಾಗಿದೆ./////