Belagavi News In Kannada | News Belgaum

ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 25 ರೂಪಾಯಿ ಇಳಿಕೆ ಮಾಡಲಾಗುವುದು : ಹೇಮಂತ್ ಸೊರೇನ್ ಘೋಷಣೆ

ಹೊಸದಿಲ್ಲಿ : ಪೆಟ್ರೋಲ್ ಬೆಲೆ ಏರಿಕೆಯಿಂದ ಕಂಗಾಲ್ ಆಗಿದ್ದ ಜಾರ್ಖಂಡ್ ರಾಜ್ಯದ ಬಡ ಜನರಿಗೆ ಅಲ್ಲಿನ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ.

ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 25 ರೂಪಾಯಿ ಇಳಿಕೆ ಮಾಡಲಾಗುವುದು ಎಂದು ಅಲ್ಲಿನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಘೋಷಣೆ ಮಾಡಿದ್ದಾರೆ. ಆದರೆ ಇದು ಎಲ್ಲರಿಗೂ ಸಿಗುವುದಿಲ್ಲ. ಬಡ ದ್ವಿಚಕ್ರ ವಾಹನ ಸವಾರರಿಗೆ ಮಾತ್ರ ನೀಡಲಾಗುತ್ತದೆ.

ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ನೀಡಿರುವ ಸಿಎಂ ಹೇಮಂತ್ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದರಿಂದ ಬಡವರು ಮತ್ತು ಮಧ್ಯಮ ವರ್ಗದವರು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ ದ್ವಿಚಕ್ರ ವಾಹನಗಳಿಗೆ ಪ್ರತಿ ಲೀಟರ್ ಪೆಟ್ರೋಲ್‌ಗೆ ₹25 ರೂಪಾಯಿ ಇಳಿಕೆ ಮಾಡಲಾಗುತ್ತದೆ. ಬಿಪಿಎಲ್ ಕಾರ್ಡ್ ಇರುವವರಿಗೆ ಜನವರಿ 26, 2022 ರಿಂದ ಇದರ ಲಾಭ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.///////