Belagavi News In Kannada | News Belgaum

ಹುಣಸಗಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಂಭ್ರಮಾಚರಣೆ

ಹುಣಸಗಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಂಭ್ರಮಾಚರಣೆ ಪಕ್ಷದ ನಾಯಕರು ಹಾಗೂ ನೂರಾರು ಕಾರ್ಯಕರ್ತರು ಭಾಗಿ ಹುಣಸಗಿ :

 

ಕಕ್ಕೇರಾ ಪುರಸಭೆ ‘ಕೈ’ ವಶವಾಗಿದ್ದು, ಆಡಳಿತರೂಢ ಬಿಜೆಪಿ ಪಕ್ಷವನ್ನು ಜನರು ತಿರಸ್ಕಾರ ಮಾಡಿದ್ದಾರೆ, ಶಾಸಕ ರಾಜೂಗೌಡ ಅವರು ಬಿರುಸಿನ ಪ್ರಚಾರ ಕೈಗೊಂಡರು ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

ಶಾಸಕ ನರಸಿಂಹ ನಾಯಕ ರಾಜೂಗೌಡ ಅವರ ಸುರಪೂರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ‘ಕಕ್ಕೇರಾ ಪುರಸಭೆ’ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿ, ಆಡಳಿತ ಚುಕ್ಕಾಣಿ ಹಿಡಿಯಲು ಸ್ಪಷ್ಟ ಬಹುಮತ ಪಡೆದಿದೆ. ಒಟ್ಟು 23 ಸ್ಥಾನಗಳಲ್ಲಿ ಕಾಂಗ್ರೆಸ್ 16, ಬಿಜೆಪಿ 6 ಹಾಗೂ ಪಕ್ಷೇತರ ಅಭ್ಯರ್ಥಿಗಳು 1 ಸ್ಥಾನ ಗಳಿಸಿದ್ದಾರೆ. ಕೊನೆಯಲ್ಲಿ, ಏಕೈಕ ಪಕ್ಷೇತರ ಅಭ್ಯರ್ಥಿ ಕೂಡ ಕಾಂಗ್ರೆಸ್ ಸೇರಿದ್ದು ಪುರಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬಲ 17ಕ್ಕೆ ಏರಿದೆ. ವರದಿ ಸಿದ್ದನಗೌಡ ಎನ್ ಬಿರಾದಾರ. ಉಪಸ್ಥಿತರಿದ್ದರು