Belagavi News In Kannada | News Belgaum

ಜನವರಿ 6ಕ್ಕೆ ಚನ್ನರಾಜ್, ಲಖನ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ನೂತನ ಸದಸ್ಯರ ಪ್ರಮಾಣ ವಚನ ಜನವರಿ 6 ರಂದು ಬೆಳಗ್ಗೆ 11ಕ್ಕೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ ಎಂದು ವಿಧಾನ ಪರಿಷತ್ ಉಪ ಕಾರ್ಯದರ್ಶಿ ಬಿ.ಎ. ಬಸವರಾಜು ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 10 ರಂದು ರಾಜ್ಯದ 25 ವಿಧಾನ ಪರಿಷತ್ ಸ್ಥಾನಗಳಿಗೆ ಮತದಾನ ನಡೆದಿತ್ತು. ಡಿ. 14 ರಂದು ಮತ ಎಣಿಕೆ ನಡೆದಿತ್ತು. 12 ಕ್ಷೇತ್ರಗಳಲ್ಲಿ ಬಿಜೆಪಿ, 11 ಕ್ಷೇತ್ರಗಳಲ್ಲಿ ಕಾಂಗ್ರೆಸ್, ಜೆಡಿಎಸ್-ಪಕ್ಷೇತರರು ತಲಾ 1ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದರು. ಬೆಳಗಾವಿ ದ್ವಿಸದಸ್ಯ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷೇತರರಾಗಿ ಲಖನ್ ಜಾರಕಿಹೊಳಿ ಚೊಚ್ಚಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.//////