Belagavi News In Kannada | News Belgaum

ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆ ಸ್ಪೋಟ ನಾಲ್ವರು ಸಜೀವ ದಹನ

ಚೈನ್ಯ:  ದೇಶದ ಪ್ರಸಿದ್ಧ ಪಟಾಕಿ ತಯಾರಕ  ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು,  ಕಾರ್ಖಾನೆಯಲ್ಲಿ ಕಾರ್ಯನಿರ್ವಸುತ್ತಿದ್ದ ನಾಲ್ವರು ಸಜೀವ ದಹನವಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದಾರೆ.

ಸ್ಫೋಟ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ರಕ್ಷಣಾ ಪಡೆಗಳು ರಕ್ಷಣಾ ಕಾರ್ಯಾದಲ್ಲಿ ನಿರತವಾಗಿವೆ.

ಸ್ಫೋಟದ ತೀವ್ರತೆಗೆ ಇಡೀ ಕಟ್ಟಡ ಧ್ವಂಸಗೊಂಡಿದ್ದು,  ಅಗ್ನಿ ಶಾಮಕ ದಳದ ತಂಡ ಕಾರ್ಖಾನೆಯ ಬೆಂಕಿ ನಂದಿಸಲು ಹರಸಾಹಸ ಪಡುವಂತಾಗಿದೆ. ಇನ್ನು ಕಟ್ಟಡದ ಅವಶೇಷಗಳ ಅಡಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ವರದಿ ತಿಳಿಸಿದೆ.//////