Belagavi News In Kannada | News Belgaum

ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಾಗವಾಡ ಶಾಖೆಯ ಅಧ್ಯಕ್ಷ ಜಿ.ಎಂ.ಸಡ್ಡಿ ಸರ್ಕಾರವನ್ನು ಒತ್ತಾಯಿಸಿದರು.

ಶೇಡಬಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಾಗವಾಡ ಶಾಖೆಯ ಅಧ್ಯಕ್ಷ ಜಿ.ಎಂ.ಸಡ್ಡಿ ಸರ್ಕಾರವನ್ನು ಒತ್ತಾಯಿಸಿದರು.
ಅವರು ಶನಿವಾರ ದಿ. 1 ರಂದು ಕೆಂಪವಾಡ ಸಕ್ಕರೆ ಕಾರ್ಖಾನೆಯ ಬಿಜೆಪಿ ಕಾರ್ಯಾಲಯದಲ್ಲಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರಿಗೆ ಮನವಿ ಪತ್ರ ಅರ್ಪಿಸಿ ಮಾತನಾಡುತ್ತಿದ್ದರು. ನಮ್ಮ ನ್ಯಾಯಯುತ ಬೇಡಿಕೆಗಳಾದ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾವಾದ ವೇತನ ಹಾಗೂ ಭತ್ಯೆಗಳನ್ನು ಜಾರಿಗೊಳಿಸುವುದು. ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಗಳನ್ನು ಜಾರಿಗೆಗೊಳಿಸುವುದು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವುದು. ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿ ಮನವಿ ಪತ್ರ ಅರ್ಪಿಸಿದರು.
ಈ ಸಮಯದಲ್ಲಿ ಕಾಗವಾಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸದಸ್ಯರು, ಶಿಕ್ಷಕರು ಇದ್ದರು.