Belagavi News In Kannada | News Belgaum

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ

ಕಲಬುರಗಿ :  ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 

ಕಲಬುರಗಿ  ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ.  ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

 

ಕೆಕೆಆರ್ ಡಿಬಿ  ಬೋರ್ಡ್ ರಚನೆಯಾಗದಿರುವ ಬಗ್ಗೆ  ಪ್ರತಿಕ್ರಿಯಿಸಿ, ಈ ವಾರದಲ್ಲಿ ಕೆಕೆಆರ್ ಡಿ ಬಿಗೆ ಪೂರ್ಣ ಪ್ರಮಾಣದ ಅಧಿಕಾರಿಗಳನ್ನು ನೀಡಲಾಗುವುದು. ಇನ್ನೆರಡು ದಿನಗಳಲ್ಲಿ ಕೆಕೆಆರ್ ಡಿಬಿ ಮಂಡಳಿಯ ರಚನೆ ಆಗಲಿದೆ.

ಮಂಡಳಿಗೆ 3000 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.