Belagavi News In Kannada | News Belgaum

ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು : ಸವದತ್ತಿ ಯಲ್ಲಮ್ಮನ ಜಾತ್ರೆಗೆ ನಿರ್ಬಂಧ

ಬೆಳಗಾವಿ ಜಿಲ್ಲೆಯ ಒಂಬತ್ತು ದೇವಾಲಯಗಲು ಕೂಡ ಬಂದ್

ಬೆಳಗಾವಿ: ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಜಿಲ್ಲೆಯ ಒಂಬತ್ತು ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸವದತ್ತಿ ಯಲ್ಲಮ್ಮನ ದೇವಸ್ಥಾನ, ಚಿಂಚಲಿ ಮಾಯಕ್ಕ, ರಾಮದುರ್ಗದ ವೀರಭದ್ರೇಶ್ವರ, ಹೊಳೆಮ್ಮಾ ದೇವಸ್ಥಾನ ಸೇರಿದಂತೆ ಜಿಲ್ಲೆಯ ಒಟ್ಟು ಒಂಬತ್ತು ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನ ನಿಷೇಧಿಸಲಾಗಿದೆ. ಸವದತ್ತಿ ಯಲ್ಲಮ್ಮನ ದೇವಸ್ಥಾನದಲ್ಲಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಜಾತ್ರೆ ನಡೆಸುವದಕ್ಕೂ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////