Belagavi News In Kannada | News Belgaum

ಅಲ್ಪಸಂಖ್ಯಾತರ ವಿದ್ಯಾಸಿರಿ ಅರ್ಜಿ ದಿನಾಂಕ ಜ. 10 ರವರೆಗೆ ವಿಸ್ತರಣೆ

ಬೆಳಗಾವಿ, ಜ.06: 2021-22 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಭೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜ.10 ರ ವರೆಗೆ ಅವಧಿ ವಿಸ್ತರಣೆ ಮಾಡಲಾಗಿದ್ದು, ನಿಗದಿತ ಅವಧಿಯಲ್ಲಿ ಸೇವಾ ಸಿಂಧು ಪೆÇೀರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೆಳಗಾವಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.