Belagavi News In Kannada | News Belgaum

ಚೀನಾ ಸೇತುವೆ ನಿರ್ಮಿಸುತ್ತಿರುವ ಮಾಹಿತಿಯು ಉಪಗ್ರಹ ಚಿತ್ರದಲ್ಲಿ ಸೆರೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಭೇಟಿ ಸಂದರ್ಭದಲ್ಲಿ ಉಂಟಾದ ಭದ್ರತಾ ಲೋಪದ ವಿಷಯವನ್ನೇ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಪ್ರಧಾನ ಅಸ್ತ್ರವಾಗಿಸಿದೆ.
ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತ-ಚೀನಾ ಗಡಿಯಲ್ಲಿ ಉಂಟಾಗಿರುವ ರಾಷ್ಟ್ರೀಯ ಭದ್ರತಾ ಲೋಪದ ಕುರಿತು ಪ್ರಧಾನಿ ಮೋದಿ ಉತ್ತರಿಸುವರೇ ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ‘ನಮ್ಮ ಗಡಿಯಲ್ಲಿ ಭಾರೀ ರಾಷ್ಟ್ರೀಯ ಭದ್ರತಾ ಲೋಪ ಉಂಟಾಗಿದೆ. ಈ ಕುರಿತು ಪ್ರಧಾನಿ ಎಂದಾದರೂ ಪ್ರತಿಕ್ರಿಯಿಸುವರೇ’ ಎಂದು ಹೇಳಿದ್ದಾರೆ.
ಪೂರ್ವ ಲಡಾಖ್‌ನ ಪಾಂಗಾಂಗ್ ಸರೋವರದ ಎರಡೂ ಬದಿಗಳಲ್ಲಿ ಚೀನಾ ಸೇತುವೆಯನ್ನು ನಿರ್ಮಿಸುತ್ತಿರುವ ಮಾಹಿತಿಯು ಉಪಗ್ರಹ ಚಿತ್ರದಲ್ಲಿ ಸೆರೆಯಾಗಿದೆ ಎಂದು ಮೂಲಗಳು ತಿಳಿಸಿದ್ದವು.//////