Belagavi News In Kannada | News Belgaum

ಕೋವಿಡ್-19 ನಿಯಂತ್ರಣ: ವಿವಿಧ ಕಾರ್ಯತಂಡಗಳ ಸಭೆ ಕೋವಿಡ್ 3ನೇ ಅಲೆಯ ನಿರ್ವಹಣೆ: ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಸೂಚನೆ

ಕೋವಿಡ್-19 ನಿಯಂತ್ರಣ: ವಿವಿಧ ಕಾರ್ಯತಂಡಗಳ ಸಭೆ

 

ಬೆಳಗಾವಿ, ಜ.07 : ಜಿಲ್ಲೆಯಲ್ಲಿ ಕೋವಿಡ್-19 ರೂಪಾಂತರ ಓಮಿಕ್ರಾನ್ ವೈರಸ್ ಹೆಚ್ಚಾಗುತ್ತಿದ್ದು, ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿಜನ್, ಬೆಡ್, ಅಗತ್ಯ ಔಷಧಿಗಳ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಬೆಡ್, ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಜ.7) ಕೋವಿಡ್-19 ನಿಯಂತ್ರಣಕ್ಕಾಗಿ ನಿಯೋಜಿಸಿದ ವಿವಿಧ ಕಾರ್ಯತಂಡಗಳ ಪೂರ್ವ ಸಿದ್ಧತೆ ಕುರಿತು ಸಭೆಯಲ್ಲಿ ಅವರು ಮಾತನಾಡಿದರು.
ಕೋವಿಡ್-19 ರೂಪಾಂತರ ವೈರಾಣು ರಾಜ್ಯದ ಎಲ್ಲೆಡೆ ವೇಗವಾಗಿ ಹರಡುತ್ತಿದ್ದು, ಗಡಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆ ಆಗುತ್ತಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಗೋವಾ, ಮಹಾರಾಷ್ಟ್ರ ಹಾಗೂ ಕೇರಳದಿಂದ ಬಂದ ಪ್ರಯಾಣ ಕರನ್ನು ಕಡ್ಡಾಯವಾಗಿ ಟೆಸ್ಟ್ ಗೆ ಒಳಪಡಿಸಿ, ಕ್ವಾರಂಟೈನ್ ಉಳಿದುಕೊಳ್ಳಲು ಸೂಚನೆ ನೀಡಬೇಕು ಎಂದು ತಿಳಿಸಿದರು.
ಗ್ರಾಮಗಳಲ್ಲಿ ಈಗಾಗಲೇ ಕೋವಿಡ್ ನಿರ್ವಹಣಾ ತಂಡಗಳಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ತೊಡಗಿಕೊಳ್ಳಲು ತಿಳಿಸಬೇಕು. ಗ್ರಾಮೀಣ ಭಾಗದಲ್ಲಿ ಹೋಮ್ ಐಸೋಲೇಶನ್ ಸಿದ್ಧತೆ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಈ ವರೆಗೆ 55 ಪ್ರಕರಣಗಳು ದಾಖಲಾಗಿದ್ದು, ಕ್ರಮೇಣ ಹೆಚ್ಚುವ ಸಾಧ್ಯತೆಯಿದೆ ಹಾಗಾಗಿ ಹೆಚ್ಚು ಭಕ್ತಾದಿಗಳು ದರ್ಶನಕ್ಕೆ ಬರುವ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಪ್ರವೇಶ ನಿಬರ್ಂಧಿಸಲಾಗಿದೆ ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50% ರಷ್ಟು ಬೆಡ್ ಗಳ ವ್ಯವಸ್ಥೆ:
ಸರ್ಕಾರದ ಆದೇಶದಂತೆ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50% ರಷ್ಟು ಬೆಡ್ ಗಳ ವ್ಯವಸ್ಥೆ ಕಲ್ಪಿಸಬೇಕು. ಈ ಕುರಿತು ಐಎಂಓ ಪದಾಧಿಕಾರಿಗಳು, ಖಾಸಗಿ ಆಸ್ಪತ್ರೆಗಳ ಸಿಇಓ ಗಳ ಸಭೆ ಕರೆದು ಸರ್ಕಾರದ ಆದೇಶದ ಕುರಿತು ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಯಾವುದೇ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಕೊರತೆ ಆಗದಂತೆ ಎಲ್ಲ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು. ಕೋವಿಡ್-19, ಓಮಿಕ್ರಾನ್ ವೈರಸ್ ಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಾಕಷ್ಟು ಮುತುವರ್ಜಿ ವಹಿಸಿಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮರ್ಪಕ ಆಕ್ಸಿಜನ್ ಪೂರೈಕೆಗೆ ಸಿದ್ಧತೆ:
ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಬೇಕು ಈಗಾಗಲೇ 5 ತಾಲೂಕುಗಳಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲಾಗಿದೆ. ಆಕ್ಸಿಜನ್ ಘಟಕಗಳಲ್ಲಿ ಡ್ರೈ ರನ್ ಮಾಡಲು ಸೂಚನೆ ನೀಡಲಾಗಿದ್ದು, ಅಧಿಕಾರಿಗಳು ಈ ಕುರಿತು ಭೇಟಿ ನೀಡಿ ಆಕ್ಸಿಜನ್ ಘಟಕಗಳನ್ನು ಪರಿಶೀಲಿಸಬೇಕು.
ಕೋವಿಡ್ ಮೊದಲ ಹಾಗೂ 2ನೇ ಅಲೆಯಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ಅಧಿಕಾರಿಗಳ ಕಾರ್ಯವೈಖರಿ ಶ್ಲಾಘನೀಯ ಎಂದು ಜಿಲ್ಲಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಕೋವಿಡ್ 3ನೇ ಅಲೆಯ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಕಾರ್ಯ ನಿರ್ವಹಿಸಬೇಕು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ನಿರ್ವಹಣೆಗೆ ಅಧಿಕಾರಿಗಳು ಹೆಚ್ಚಿನ ಮಟ್ಟದ ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ತಿಳಿಸಿದರು.
ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ಸ್ಥಳೀಯ ಹಾಸ್ಟೆಲ್ ಗಳನ್ನ ಬಳಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಗ್ಯ ಮಿತ್ರ ಆಪ್ ಮೂಲಕ ನೋಂದಣ ಮಾಡಿಕೊಂಡು, ಕೋವಿಡ್, ಓಮಿಕ್ರಾನ್ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಅವರಿಗೆ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಬೇಕು
ಎ.ಬಿ.ಆರ್.ಕೆ ಅಪೆÇ್ರೀವಲ್ ನಂತರ ಎಲ್ಲ ಸ್ಥಳೀಯ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ಯೋಜನೆ ಮೂಲಕ ಉಚಿತ ಸೇವೆ ಒದಗಿಸಬೇಕು. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಆಗದಂತೆ ತಡೆಯಬಹುದು ಎಂದು ಅಪರ ಜಿಲ್ಲಾಧಿಕಾರಿ ದುಡಗುಂಟಿ ತಿಳಿಸಿದರು.
ಬುಡಾ ಆಯುಕ್ತ ಪ್ರೀತಂ ನಸಲಾಪುರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳದಾ ಶಶಿಕಾಂತ ಮುನ್ಯಾಳ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕರಾದ ಬಸವರಾಜ ವರವಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವಾಪಿಸಂ.24
ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ
ಬೆಳಗಾವಿ, ಜ.07 (ಕರ್ನಾಟಕ ವಾರ್ತೆ): ಸರ್ಕಾರದ ಕೋವಿಡ್ 19 ಮಾರ್ಗಸೂಚಿಯಂತೆ ಸಾರ್ವಜನಿಕರು, ವಿವಿಧ ಇಲಾಖೆಗಳ ಮುಖ್ಯಸ್ಥರು, ಖಾಸಗಿ ಸಂಘ/ಸಂಸ್ಥೆಗಳು ಶಿಸ್ತುಬದ್ಧ ಮತ್ತು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಓಮಿಕ್ರಾನ್ ರೂಪಾಂತರದ ಕಾರಣದಿಂದ ರಾಜ್ಯದಲ್ಲಿ ರೋಗಿಗಳ ಸಂಖ್ಯೆ, ದ್ವಿಗುಣಗೊಳ್ಳುತ್ತಿದೆ. ಇದರಿಂದಾಗಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ನಸಿರ್ಂಗ ಹೋಮ್‍ಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸುವ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದೆ.
ವಾರಾಂತ್ಯ ಕರ್ಫೂ ಕುರಿತಾಗಿ ಜ.04 ರಂದು ಹೊರಡಿಸಿದ ಆದೇಶದಲ್ಲಿ ಕಂಡಿಕೆ-01, 09ಗೆ ಸಂಬಂಧಿಸಿದಂತೆ ಪರಿಷ್ಕøತ ಆದೇಶಗಳನ್ನು ಹೊರಡಿಸಲಾಗಿದೆ.
ಸರ್ಕಾರದ ಆದೇಶದಲ್ಲಿ ಈಗಾಗಲೇ ಜ.04 ರಂದು ಹೊರಡಿಸಿದ ಆದೇಶದಲ್ಲಿನ ಮಾರ್ಗಸೂಚಿಗಳ ಜೊತೆಗೆ ಹೆಚ್ಚುವರಿಯಾಗಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ವಿವರಿಸಲಾಗಿದ್ದು, ಈ ಕುರಿತು ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಮತ್ತು ಕಾರ್ಮಿಕ ಇಲಾಖೆಯವರಿಗೆ ಆದೇಶಿಸಲಾಗಿದೆ.
ಸರ್ಕಾರದ ಆದೇಶದಲ್ಲಿ ಜ.04 ರಂದು ಹೊರಡಿಸಿದ ಆದೇಶದಲ್ಲಿನ ಮಾರ್ಗಸೂಚಿಗಳ ಜೊತೆಗೆ ಹೆಚ್ಚುವರಿಯಾಗಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಆದೇಶಿಸಲಾಗಿದೆ.
ಒಂದು ವೇಳೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುμÁ್ಠನಗೊಳಿಸದೇ ಇದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ಛಿhಯಲ್ಲಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಳಗಾವಿಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ಅವರು ಆದೇಶವನ್ನು ಹೋರಡಿಸಿದ್ದಾರೆ