Belagavi News In Kannada | News Belgaum

ಏನೇ ಆದರೂ ಪಾದಯಾತ್ರೆಯಿಂದ ಹಿಂದೆ ಸರಿಯುವುದಿಲ್ಲಎಂದ : ಸಿದ್ದರಾಮಯ್ಯ

ಮೈಸೂರು: ಅಕ್ರಮ ಗಣಿಗಾರಿಕೆ ವಿರುದ್ಧ ಬೆಂಗಳೂರು-ಬಳ್ಳಾರಿ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಂಚೂಣಿಯಿಂದ ಮುನ್ನಡೆಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮೇಕೆದಾಟು ಪಾದಯಾತ್ರೆಗೆ ಸಿದ್ಧತೆಯಲ್ಲಿದ್ದಾರೆ.

ಏನೇ ಆದರೂ ಪಾದಯಾತ್ರೆಯಿಂದ ಹಿಂದೆ ಸರಿಯುವುದಿಲ್ಲ, ಶಿವಕುಮಾರ್ ಜೊತೆ ಬೆಂಗಳೂರಿನವರೆಗೂ ನಡೆಯುತ್ತೇನೆ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಅವರು, ಪಾದಯಾತ್ರೆಗಾಗಿ ಹೊಸ ಶೂ, ಮೆಡಿಕಲ್ ಕಿಟ್, ಕ್ಯಾಪ್, ವಾಟರ್ ಬಾಟಲ್ ಗಳೊಂದಿಗೆ ತಮ್ಮ ಬ್ಯಾಗ್ ಸಿದ್ಧಪಡಿಸಿಕೊಂಡಿದ್ದಾರೆ.
ಪಾದಯಾತ್ರೆಗೂ ಮುನ್ನ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿದ್ದ ಅವರು, ನಗರದ ಹೊರವಲಯದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಕೆಲವು ಕಾಂಗ್ರೆಸ್ ಮುಖಂಡರೊಂದಿಗೆ ವಿಶ್ರಾಂತಿ ಪಡೆದಿದ್ದಾರೆ.
160 ಕಿ.ಮೀ ಕ್ರಮಿಸುವ 10 ದಿನಗಳ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಜೊತೆಗೆ ಅವರ ವೈಯಕ್ತಿಕ ಸಿಬ್ಬಂದಿ ಮತ್ತು ಗನ್‌ಮ್ಯಾನ್ ಕೂಡ ಭಾಗವಹಿಸಲಿದ್ದಾರೆ.//////