Belagavi News In Kannada | News Belgaum

ನಾಳೆ, ನಾಡಿದ್ದು ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯಲ್ಲಿ ಜ. 10 ಮತ್ತು 11 ರಂದು  ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಭಾಗವಹಿಸಲಿದ್ದಾರೆ.

ಪಾದಯಾತ್ರೆಯಲ್ಲಿ ಸಂಸದ ಡಿ.ಕೆ. ಸುರೇಶ್, ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.‌ ಧ್ರುವನಾರಾಯಣ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ್‌ ಸೇರಿದಂತೆ ಕಾಂಗ್ರೆಸ್‌ ಶಾಸಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆಪ್ತ ವಲಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ./////