Belagavi News In Kannada | News Belgaum

ಬಸವಣ್ಣ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು

ಬೆಳಗಾವಿ: ತಾಲೂಕಿನ ಕಲಾರಕೊಪ್ಪ ಗ್ರಾಮದಲ್ಲಿ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು ಲಕ್ಷಾಂತರ ರೂಪಾಯಿ ಆಭರಣ ಸೇರಿಂದತೆ, ಕಾಣಿಕೆ ಪೆಟ್ಟಿಗೆ ಹೊತ್ತೊಯ್ದಿದ್ದಾರೆ.
ಬೆಳಗಾವಿ ತಾಲೂಕಿನ ಕಲಾರಕೊಪ್ಪ ಗ್ರಾಮದಲ್ಲಿ ಬಸವಣ್ಣ ದೇವರ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು, ಸುಮಾರು 2. 5 ಲಕ್ಷ ಮೌಲ್ಯದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಎಗರಿಸಿದ್ದಾರೆ. ಇದರೊಂದಿಗೆ ದೇವಸ್ಥಾನದಲ್ಲಿದ್ದ ಕಾಣಿಕೆ ಪೆಟ್ಟಿಗೆಯನ್ನೂ ಸಹ ಹೊತ್ತೊಯ್ದಿದ್ದಾರೆ.

ಈ ವೇಳೆ ಮಾತನಾಡಿದ ಗ್ರಾಮಸ್ಥರು, ನಿನ್ನೆ ತಡರಾತ್ರಿ ಕಳ್ಳರು ಬಸವಣ್ಣ, ಲಕ್ಷ್ಮಿ ಹಾಗೂ ಸರಸ್ವತಿ ಮಂದಿರಗಳಲ್ಲಿ ಕಳ್ಳತನ ಮಾಡಿದ್ದಾರೆ. ದೇವರ ಮೂರ್ತಿ ಕಾಣಿಕೆ ಪೆಟ್ಟಿಗೆ ಸೇರಿದಂತೆ ಸುಮಾರು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎಂದರು. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.//////