Belagavi News In Kannada | News Belgaum

ಬೆಳಗಾವಿ ಹೆಚ್ಚುವರಿ ಎಸ್ಪಿಯಾಗಿ ನಂದಗಾವಿ ಅಧಿಕಾರ ಸ್ವೀಕಾರ : ಕಾನೂನು ಕಾಪಾಡುವಲ್ಲಿ ಸೂಕ್ತ ಕ್ರಮ

ಬೆಳಗಾವಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಲಾಖೆಯಿಂದ ಸೂಕ್ತ ಕ್ರಮ ಜರುಗಿಸಲಾಗುವುದು  ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾವಿ ಹೇಳಿದರು.

ಭಾನುವಾರ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು.  ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಕರ್ತವ್ಯ ನಿರ್ವಹಣೆ ದೊಡ್ಡ ಸವಾಲಿನ ಕಾರ್ಯವಾಗಿದೆ. ಹೀಗಾಗಿ  ಎಲ್ಲರ ಸಹಕಾರದೊಂದಿಗೆ ಉತ್ತಮ ಕಾರ್ಯ ನಿರ್ವಹಿಸಲಾಗುವುದು ಎಂದು ಹೇಳಿದರು.

ಮಹಾನಿಂಗ ನಂದಗಾವಿ ಈ ಹಿಂದೆ, ರಾಮದುರ್ಗ ಡಿವೈಎಸ್ಪಿ ಹಾಗೂ ಬೆಳಗಾವಿ ಪೊಲೀಸ್‌ ಕಮೀಷನರ್‌ ಅಪರಾದ ಹಾಗೂ ಸಂಚಾರ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದರು.  ಬಳಿಕ    ಚಿತ್ರದುರ್ಗ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ಯನಿರ್ವಸುತ್ತಿದ್ದ ಮಹಾನಿಂಗ ನಂದಗಾವಿ ಅವರನ್ನು ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು, ಅಧಿಕಾರ ಸ್ವೀಕರಿಸಿದ್ದಾರೆ.//////