Belagavi News In Kannada | News Belgaum

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ

ದಾವಣಗೆರೆ: ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗುತ್ತಲೇ ಇದೆ. ಕಳೆದೊಂದು ವಾರದಲ್ಲಿ ಪಾಸಿಟಿವ್ ಕೂಡ ಜಾಸ್ತಿಯಾಗುತ್ತಿದೆ. ಜಿಲ್ಲಾಡಳಿತವು ಕಟ್ಟುನಿಟ್ಟಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂಬ ಆದೇಶ ಹೊರಡಿಸಿದೆ.
ಆದರೆ, ಈ ಆದೇಶ ಮಾತ್ರ ಜನಪ್ರತಿನಿಧಿಗಳಿಗೆ ಅನ್ವಯಿಸಿದಂತೆ ಕಾಣುತ್ತಿಲ್ಲ. ಹೊನ್ನಾಳಿ ಶಾಸಕರೂ ಆದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮತ್ತೆ ಕರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ.
ಬಲಮುರಿ ಗ್ರಾಮದ ಜನರು ನನ್ನನ್ನು ಹೋರಿ ಬೆದರಿಸುವ ಹಬ್ಬಕ್ಕೆ ಪ್ರೀತಿಯಿಂದ ಆಹ್ವಾನಿಸಿದಾಗ ಅವರ ಪ್ರೀತಿಗೆ ಸೋತು ಹೋಗಿದ್ದೆ. ಆದರೆ ಅಲ್ಲಿ ಹೆಚ್ಚಿನ ಜನಸಂಖ್ಯೆ ಸೇರಿದ ಪರಿಣಾಮ ಕೋವಿಡ್ ಮಾರ್ಗಸೂಚಿಗಳನ್ನು ನಾವು ಪಾಲಿಸುವಲ್ಲಿ ವಿಫಲರಾಗಿದ್ದೇವೆ ಎಂಬುದನ್ನು ವಿನಮ್ರವಾಗಿ ಒಪ್ಪಿಕೊಳ್ಳುವೆ. ಈ ಅಚಾತುರ್ಯಕ್ಕೆ ವಿಷಾದಿಸುವೆ ಎಂದು ರೇಣುಕಾಚಾರ್ಯ ಟ್ವೀಟ್ ಮೂಲಕ ಕ್ಷಮೆಯಾಸಿದ್ದಾರೆ.
ಸರ್ಕಾರ ಮೇಕೆದಾಟು ಪಾದಯಾತ್ರೆಯಲ್ಲಿ ಕಾಂಗ್ರೆಸ್‌ ನಾಯಕರು ಕರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ ಎಂದು ಕೇಸ್‌ ದಾಖಲಿಸಿದೆ. ಆದರೆ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮೇಲೆ ಕೇಸ್‌ ದಾಖಲಿಸುತ್ತಾ?ಎಂದು ಕಾಂಗ್ರೆಸ್‌ ನಾಯಕರು ಪ್ರಶ್ನಿಸಿದ್ದಾರೆ./////