Belagavi News In Kannada | News Belgaum

ಮಾಯಾವತಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಸಂಸದ ಸತೀಶ್ ಚಂದ್ರ ಮಿಶ್ರಾ ಹೇಳಿಕೆ

ಲಕ್ನೋ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ಪಿ ನಾಯಕಿ ಮಾಯಾವತಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಂಸದ ಸತೀಶ್ ಚಂದ್ರ ಮಿಶ್ರಾ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ಪಿಯನ್ನು ಮರಳಿ ಅಧಿಕಾರಕ್ಕೆ ತರುವ ಸಲುವಾಗಿ ಈ ಬಾರಿ ಮಾಯಾವತಿ ಅವರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ. ಹಾಗಾಗಿ ತಾವು ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಈ ಮೊದಲು ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಅದರಿಂದ ಅವರಿಗೆ ಮುಖ್ಯಮಂತ್ರಿ ಹುದ್ದೆ ಉಳಿಸಿಕೊಳ್ಳುವ ವಿಷಯದಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು.

ಕೊನೆಗೆ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆದ್ದು ಅಧಿಕಾರ ಉಳಿಸಿಕೊಂಡರು. ಆದರೂ ಒಂದಷ್ಟು ದಿನಗಳ ಕಾಲ ಮುಜುಗರ ಅನುಭವಿಸಬೇಕಾಯಿತು.ಅದೇ ಪರಿಸ್ಥಿತಿ ತಮಗೆ ಬರಬಾರದು ಎಂಬ ಕಾರಣಕ್ಕೆ ಮಾಯಾವತಿ ಚುನಾವಣೆಯಿಂದ ಸ್ಪರ್ಧೆ ಮಾಡುತ್ತಿಲ್ಲ ಎನ್ನಲಾಗಿದೆ. ತಾವು ಮತ್ತು ಮಾಯಾವತಿ ಇಬ್ಬರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂದು ಸತೀಶ್ ಚಂದ್ರ ಸ್ಪಷ್ಟ ಪಡಿಸಿದ್ದಾರೆ.//////