Belagavi News In Kannada | News Belgaum

“ರಾಷ್ಟ್ರೀಯ ಯುವ ದಿನಾಚರಣೆ”

ನಿಡಸೋಸಿ: ಸಮೀಪದ ಎಸ್.ಜೆ.ಪಿ.ಎನ್.ಟ್ರಸ್ಟಿನ ಹಿರಾಶುಗರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ 159ನೇ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಸಿ.ಕಮತೆಯವರು ಮಾತನಾಡಿ ಸ್ವಾಮಿ ವಿವೇಕಾನಂದರ ಸಂದೇಶಗಳು ಇಂದಿನ ಯುವ ಜನತೆಗೆ ಸ್ಪೂರ್ತಿಯಾಗಿ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು ಕಾಲೇಜಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಘಟಕದ ಮುಖ್ಯಸ್ಥರಾದ ಪ್ರೊ. ಆರ್.ಆರ್. ಪಾಟೀಲ ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.