Belagavi News In Kannada | News Belgaum

ಸಂಕ್ರಾಂತಿ ಹಬ್ಬಕ್ಕೆ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿಯೊಂದನ್ನು ನೀಡಿದೆ.

ಅತಿಥಿ ಉಪನ್ಯಾಸಕರ ಬಹು ದಿನಗಳ ಬೇಡಿಕೆಗಳಿಗೆ ಸಮ್ಮತಿ ಸೂಚಿಸಿದೆ. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಲು ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ.

ಉಪನ್ಯಾಸಕರ ಬೇಡಿಕೆಯ ಶಿಫಾರಸುಗಳಿಗೆ ಸಮ್ಮತಿ ಸೂಚಿಸಿ ಇಂದು ಕಡತಗಳನ್ನು ಸಿಎಂ ವಿಲೇವಾರಿ ಮಾಡಿದ್ದಾರೆ.  ಈ ಸಂಬಂಧ ರಚಿಸಲಾಗಿದ್ದ  ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ.

ಕರ್ನಾಟಕ ಸರ್ಕಾರದ ವತಿಯಿಂದ ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡುವ ಮೂಲಕ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿಯೊಂದು ನೀಡಿದೆ.