Belagavi News In Kannada | News Belgaum

ಧಾರವಾಡ ಉಪವಿಭಾಗಾಧಿಕಾರಿಯಾಗಿ ಅಶೋಕ ತೇಲಿ ಅಧಿಕಾರ ಸ್ವೀಕಾರ

ಧಾರವಾಡ ಉಪವಿಭಾಗಾಧಿಕಾರಿಯಾಗಿ ಅಶೋಕ ತೇಲಿ ಅಧಿಕಾರ ಸ್ವೀಕಾರ

ಧಾರವಾಡ : ಜ.13: ಧಾರವಾಡ ಉಪವಿಭಾಗಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಅಶೋಕ್ ತೇಲಿ ಅವರು ಇಂದು ಬೆಳಿಗ್ಗೆ ಡಾ.ಗೋಪಾಲಕೃಷ್ಣ .ಬಿ. ಅವರಿಂದ ಅಧಿಕಾರ ವಹಿಸಿಕೊಂಡರು.

ನೂತನ ಎಸಿ ಅಶೋಕ ತೇಲಿಯವರು ಮೂಲತಃ ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ಗ್ರಾಮದವರಾಗಿದ್ದಾರೆ. ಇವರು 2004 ರಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿಧರರಾಗಿದ್ದು, ಸುಮಾರು 8 ವರ್ಷಗಳ ಕಾಲ ಸಾಫ್ಟ್‍ವೇರ್ ಇಂಜಿನೀಯರ್ ಆಗಿ ಕೆಲಸ ಮಾಡಿದ್ದಾರೆ.

2014 ರ ಬ್ಯಾಚ್ ಎಸಿ ಆಗಿರುವ ಇವರು ಚಿಕ್ಕಬಳ್ಳಾಪುರದಲ್ಲಿ ಪೆÇ್ರಬೇಷನರಿ ಎಸಿ ಆಗಿ ಜಮಖಂಡಿ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಬೆಳಗಾವಿ ಉಪವಿಭಾಗಾಧಿಕಾರಿಯಾಗಿ, ಧಾರವಾಡದಲ್ಲಿ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮತ್ತು ಸವಣೂರ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿ ಇಂದು ಧಾರವಾಡ ಉಪವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.