ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚೆನ್ನಮ್ಮ, ರಾಯಣ್ಣ ಪ್ರತಿಮೆ: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಭಾಷಾ ಸೂಕ್ಷ್ಮತೆ ಹಾಗೂ ವಿವಾದಕ್ಕೆ ಕಾರಣವಾಗಿರುವ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಲಾಗುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಸುವರ್ಣಸೌಧದಲ್ಲಿ ರಾಯಣ್ಣ ಹಾಗೂ ಚನ್ನಮ್ಮ ಪ್ರತಿಮೆ ಸ್ಥಾಪನೆ ಬಗ್ಗೆ ಪ್ರಸ್ತಾಪಿಸುವ ಮೂಲಕ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಪ್ರತಿಪಾದಿಸಿದಂತಾಗಿದೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಎಂಇಎಸ್ ಹಾಗೂ ಮರಾಠಾ ಸಂಘಟನೆಗಳು ದಾಂಧಲೆ ನಡೆಸಿದ್ದವು. ಈ ಪ್ರಕರಣ ಸರಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಸುವರ್ಣ ಸೌಧದಲ್ಲಿ ರಾಯಣ್ಣ ಹಾಗೂ ಚನ್ನಮ್ನ ಪ್ರತಿಮೆ ಸ್ಥಾಪಿಸು ವಿಚಾರವನ್ನು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸುವ ಮೂಲಕ ರಾಜ್ಯ ಸರಕಾರ ತಿರುಗೇಟು ನೀಡಿದೆ.//////