Belagavi News In Kannada | News Belgaum

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಖಾಸಗಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಶವಂತಪುರ ರೈಲ್ವೆ ಟ್ರಾಕ್‍ನಲ್ಲಿ ನಡೆದಿದೆ.
9ನೇ ತರಗತಿ ರಮ್ಯಾ ಮೂರ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ರಮ್ಯಾ ಮೂರ್ತಿ ಟಿ.ದಾಸರಹಳ್ಳಿಯ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಕಳೆದ ಅಕ್ಟೋಬರ್‌ ನಲ್ಲಿ ರಮ್ಯಾ ಶಾಲೆಗೆ ಸ್ನಾಕ್ಸ್ ತೆಗೆದುಕೊಂಡು ಹೋಗಿದ್ದಳು. ರಮ್ಯಾ ಶಾಲೆಗೆ ಸ್ನಾಕ್ಸ್ ತೆಗೆದುಕೊಂಡು ಹೋಗಿರುವ ವಿಚಾರ ಶಾಲೆ ಶಿಕ್ಷಕರ ಗಮನಕ್ಕೆ ಬಂದು ಪ್ರಾಂಶುಪಾಲರಿಗೆ ವಿಚಾರ ಗೊತ್ತಾಗಿ ವಿದ್ಯಾರ್ಥಿನಿ ಪೋಷಕರಿಗೆ ಕರೆದು ಎಚ್ಚರಿಕೆ ಕೊಟ್ಟು ಕಳುಹಿಸಿದ್ದರು.
ಶಾಲಾ ಆಡಳಿತ ಮಂಡಳಿಯಿಂದ ಅಸಮಾಧಾನಗೊಂಡ ರಮ್ಯಾ ತಾಯಿ ಶಾಲೆ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರಂತೆ. ರಮ್ಯಾ ತಾಯಿ ಶಾಲೆ ವಿರುದ್ಧ ದೂರು ನೀಡಿದ್ದರಿಂದ ಶಾಲೆಯಲ್ಲಿ ವಿದ್ಯಾರ್ಥಿನಿ ರಮ್ಯಾಳಿಗೆ ಕಿರುಕುಳ ಕೊಡುತ್ತಿದ್ದ ಕಾರಣಕ್ಕಾಗಿ ಮನನೊಂದು ನಿನ್ನೆ ಬೆಳಗ್ಗೆ ವಾಕಿಂಗ್ ಹೋಗುವಂತೆ ಹೋಗಿ ರೈಲಿಗೆ ತಲೆಕೊಟ್ಟು ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ./////