ಉಕ್ರೇನ್ ಬಂಕರ್ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ್ದು, ಮನೆಯನ್ನು ಕಳೆದುಕೊಂಡು ಇರಲು ಜಾಗ ವಿಲ್ಲದೆ ಪರದಾಡುತ್ತಿದ್ದಾರೆ. ಈ ಮಧ್ಯೆ ಮಹಿಳೆಯೊಬ್ಬರು ಬಂಕರ್ನಲ್ಲಿ ಮಗುವಿಗೆ ಜನ್ಮವನ್ನು ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
23 ವರ್ಷದ ಅಮೀದ್ ಚವ್ಸ್ ರಷ್ಯಾ ದಾಳಿಗೆ ಹೆದರಿ ಮೆಟ್ರೋ ಸ್ಟೇಶನ್ ಸಿಟಿ ಬಳಿ ಇರುವ ಬಂಕರ್ನಲ್ಲಿ ಅಡಗಿ ಕುಳಿತಿದ್ದರು. ಈ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಮಹಿಳೆಯ ಕಿರುಚಾಟವನ್ನು ಕೇಳಿ ಉಕ್ರೇನ್ ಪೊಲೀಸರು ಸಹಾಯ ಬಂದಿದ್ದಾರೆ. ಆಗ ವೈದ್ಯರು ಬಂಕರ್ನಲ್ಲಿ ಹೆರಿಗೆ ಮಾಡಿಸಿದ್ದಾರೆ. ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ./////