Belagavi News In Kannada | News Belgaum

ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕುರಿತು ಜಿಲ್ಲಾ ಮಟ್ಟದ ಸಭೆ

ಅವಲಂಬಿತರಿಗೆ ನಿವೇಶನಗಳನ್ನು ಮಂಜೂರು ಮಾಡಲು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ

ಬೆಳಗಾವಿ, ಮಾ.3 : : ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಜಿಲ್ಲೆಯಲ್ಲಿ ಇರುವುದಿಲ್ಲ ಆದರೆ ಅವರ ಅವಲಂಬಿತರಿಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನಗಳನ್ನು ಮಂಜೂರು ಮಾಡಿ ವಸತಿ ಗ್ರಹಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ ಹೀರೆಮಠ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಗುರುವಾರ (ಮಾ.3) ನಡೆದ ಮ್ಯನುವ್ಯೆಲ್ ಸ್ಕ್ಯಾವೆಂಜರ್ ನಿμÉೀಧ ಮತ್ತು ಅವರ ಪುನರ್ವಸತಿ ಕಾಯ್ದೆ 2013ರ ಅನುμÁ್ಠನದ ಕುರಿತು ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಫಾಯಿ ಕರ್ಮಚಾರಿಗಳಿಗೆ ಸರಕಾರದ ಸೌಲಭ್ಯ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸವಲತ್ತು ಸಿಗುವಂತೆ ನೋಡಿಕೊಳ್ಳಬೇಕು. ಅವಲಂಬಿತರಿಗೆ ಸರಕಾರದ ಯೋಜನೆಗಳು ತಲುಪಿಸಬೇಕು ಎಂದು ತಿಳಿಸಿದರು.
ಪಾಲಿಕೆಯ ವ್ಯಾಪ್ತಿಯಲ್ಲಿನ ಪೌರಕಾರ್ಮಿಕರ ವಸತಿ ಗೃಹಗಳ ಮಾಲೀಕತ್ವದ ಆಧಾರದ ಮೇಲೆ ಅವರಿಗೆ ಹಕ್ಕುಪತ್ರ ವಿತರಿಸುವ ಬಗ್ಗೆ ಕೂಡಲೇ ಕ್ರಮ ವಹಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ತಕ್ಷಣವೇ ಈ ಕುರಿತು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಎಂ.ಜಿ ಹಿರೇಮಠ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಉಮಾ ಸಾಲಿಗೌಡರ, ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ, ಮಹಾನಗರ ಪಾಲಿಕೆ ಮುಖ್ಯ ವೈದ್ಯಾಧಿಕಾರಿ ಸಂಜಯ ಡುಮ್ಮಗೊಳ, ಬಿಮ್ಸ್ ಅಧಿಕಾರಿಗಳಾದ ಸೈದಾ ಬಳ್ಳಾರಿ, ಡಿ.ಯು.ಡಿ.ಸಿ ಪ್ರಿಯಾಂಕ ವಿನಾಯಕ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.