Belagavi News In Kannada | News Belgaum

ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಇಬ್ಬರು ನೈಜಿರೀಯನ್ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
ನೈಜಿರಿಯನ್ ಪ್ರಜೆಗಳಾದ ಕ್ರಿಸ್ಟಿಯನ್ ಇಯ್ಕ್ ಚುಕ್ವು ಹಾಗೂ ಜಾನ್ ಓಬಿನಾ ಬಂಧಿತ ಆರೋಪಿಗಳು. ಬಂಧಿತರಿಂದ 50 ಲಕ್ಷ ರೂ. ಮೌಲ್ಯದ 400 ಗ್ರಾಂ ಎಂಡಿಎಂ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಗಳು, ಆನ್ ಲೈನ್ ಮೂಲಕ ಸಂಪರ್ಕ ಸಾಧಿಸುತ್ತಿದ್ದರು ಎಂದು ತಿಳಿದುಬಂದಿದೆ.///////