Belagavi News In Kannada | News Belgaum

ಗೋವಾದಲ್ಲಿ ಬಿಜೆಪಿಗೆ ಎಂಜಿಪಿ ಬೆಂಬಲ

ಪಣಜಿ: ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ ಬೆಂಬಲದೊಂದಿಗೆ ಗೋವಾದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ಬಿಜೆಪಿ ವರಿಷ್ಠರು ತಿಳಿಸಿದ್ದಾರೆ.

ಪ್ರಸ್ತುತ ಯಾವುದೇ ಪಕ್ಷ ಬಹುಮತಗಳಿಸಲು ಸಾಧ್ಯವಾಗದೇ ಇರುವುದರಿಂದ ಬೆಂಬಲಿತ ಅಥವಾ ಮೈತ್ರಿ ಸರ್ಕಾರ ಆಡಳಿತಕ್ಕೆ ಬರುವುದು ನಿಶ್ಚಿತವಾಗಿದೆ. ಇದಕ್ಕಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದು ಹ್ಯಾಟ್ರಿಕ್ ಭಾರೀಸಲಿದೆ. ಎಂಜಿಪಿ ಕಿಂಗ್‍ಮೇಕರ್ ಆಗಿದ್ದು, ಬಿಜೆಪಿ ಪರ ಒಲವು ನಿಶ್ಚಿತ ಎಂದು ಹೇಳಲಾಗುತ್ತಿದೆ. ಸಂಕ್ವೆಲಿಮ್ ಕ್ಷೇತ್ರದಲ್ಲಿ ಸಿಎಂ ಪ್ರಮೋದ್ ಸಾವಂತ್ ಮುನ್ನಡೆಯಲ್ಲಿದ್ದರೆ, ಮುಖ್ಯಮಂತ್ರಿ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿರುವ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ವಾಲ್ಪೊಯ್ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ./////