Belagavi News In Kannada | News Belgaum

ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುವೆ: ರಾಹುಲ್ ಗಾಂಧಿ

ನವದೆಹಲಿ: ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ನಲ್ಲಿ ಜನಾದೇಶವನ್ನು ಗೆದ್ದವರಿಗೆ ಶುಭಾಶಯಗಳು.ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು.
ನಾವು ಇದರಿಂದ ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಬರೆದಿದ್ದಾರೆ.
ಕಾಂಗ್ರೆಸ್ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದು, ಉತ್ತರಪ್ರದೇಶದಲ್ಲಿ ಹೀನಾಯ ನಿರ್ವಹಣೆ ನೀಡಿದೆ. ಭರವಸೆ ಹೊತ್ತಿದ್ದ ಉತ್ತರಾಖಂಡ ಮತ್ತು ಗೋವದಲ್ಲೂ ಅಷ್ಟೇನೂ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿಲ್ಲ ಎಂದು ಟ್ವೀಟ್ ನಲ್ಲಿ ಮಾಹಿತಿ ತಿಳಿಸಿದ್ದಾರೆ./////