Belagavi News In Kannada | News Belgaum

ಪಂಚರಾಜ್ಯಗಳ ಚುನಾವಣೆ ಫಲಿತಾಂಶಕ್ಕೆ ವಿಜಯೊತ್ಸವ ಆಚರಿಸಿದ ಚಿಕ್ಕೊಡಿ ಬಿಜೆಪಿ ಜಿಲ್ಲಾ ವಕ್ತಾರ ಸೊಡ್ಡನವರ ಹಾಗೂ ವಕೀಲ ಸದಸ್ಯರು

ಹುಕ್ಕೇರಿ:  ಪಂಚರಾಜ್ಯಗಳ ಚುನಾವಣೆ ಫಲಿತಾಂಶಕ್ಕೆ ವಿಜಯೊತ್ಸವ ಆಚರಿಸಿದ ಚಿಕ್ಕೊಡಿ ಬಿಜೆಪಿ ಜಿಲ್ಲಾ ವಕ್ತಾರ ಸೊಡ್ಡನವರ ಹಾಗೂ ವಕೀಲ ಸದಸ್ಯರುಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ.

ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ ಹಿನ್ನಲೆಯಲ್ಲಿ ಪ್ರಧಾನಿಗಳ ಜನಪರ ಕಾರ್ಯಗಳಿಗೆ ಮತದಾರರು ಬಹುಪರಾಖ್ ಹೇಳಿದ್ದಾರೆ. ಮುಂದೆ ನಡೆಯುವ ವಿವಿಧ ರಾಜ್ಯಗಳ ವಿಧಾನ ಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಈ ಚುವಾವಣಾ ಫಲಿತಾಂಶ ದಿಕ್ಸೂಚಿಯಾಗಲಿದೆ. ೨೦೨೩ ರಲ್ಲಿ ನಡೆಯುವ ನಮ್ಮ ಕರ್ನಾಟಕ ರಾಜ್ಯದ ಚುನಾವಣೆಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಮತ್ತೊಮ್ಮೆ ಅಧಿಕಾರ ಪಡೆಯಲಿದೆ ಎಂದು ಹೇಳಿದರು.

ಐದರ ಪೈಕಿ ನಾಲ್ಕು ರಾಜ್ಯಗಳಲ್ಲಿ ಸ್ಪಷ್ಟ ಬಹುಮತ ಪಡೆದು ಜನರ ಆಶೀರ್ವಾದದಿಂದ ಅಧಿಕಾರದ ಗದ್ದುಗೆ ಹಿಡಿಯಲು ಸಾರಥಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಹಾಗೂ ಸಹಕಾರ ಸಚಿವ ಅಮಿತ ಶಾ ಹಾಗೂ ‌ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸಿರುವ ಅವರು, ಸಕಲ ಕಾರ್ಯಕರ್ತರ ಪಡೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇನ್ನು ದೇಶದಲ್ಲಿ ನರೇಂದ್ರ ಮೋದಿ ಅವರದ್ದೇ ಹವಾ ಎಂದು ಚಿಕ್ಕೋಡಿ ಬಿಜೆಪಿ ಜಿಲ್ಲಾ ವಕ್ತಾರ ಟಿ ಎಸ್ ಸೊಡ್ಡನವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಆರ್ ಪಿ ಚೌಗಲಾ ಪಿಎಸ್ ಮುತಾಲಿಕ ಯು ಬಿ ಪಾಟೀಲ ಎನ್ ಎಮ್ ಬೊರಗಲ್ಲಿ ನಿಂಗನಗೌಡ ಪಾಟೀಲ ಅನಿಲ ಕರಡಿ ವಿನಯಗೌಡ ಪಾಟೀಲ ವಿಜಯೊತ್ಸವದಲ್ಲಿ ಭಾಗವಹಿಸಿದ್ದರು.