Belagavi News In Kannada | News Belgaum

ಪ್ರತಿಯೊಬ್ಬರಿಗೂ ಸಂಧ್ಯಾಕಾಲದಲ್ಲಿ ಸಾಮಾಜಿಕ ಭದ್ರತೆ ಹೊಂದಲು ಪಿಂಚಣಿ ಯೋಜನೆ ಅವಶ್ಯಕ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆ

 

ಬೆಳಗಾವಿ, ಮಾರ್ಚ್ 11  : ಕಾರ್ಮಿಕರಿಗೆ ಅವರ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೆÇೀಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ, ಆದ್ದರಿಂದ ಕಾರ್ಮಿಕರಿಗೆ ಸಂಧ್ಯಾಕಾಲದಲ್ಲಿ ಸ್ವಯಂ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶುಕ್ರವಾರ(ಮಾರ್ಚ್ 11) ರಂದು ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆ ಸಪ್ತಾಯ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆಯು ದೇಶದ ಅಸಂಘಟಿತ ವಲಯ ಕಾರ್ಮಿಕರ ಪಿಂಚಣಿ ಯೋಜನೆಯಾಗಿದೆ. ಈ ಯೋಜನೆಗೆ ಒಳಪಡುವ ಕಾರ್ಮಿಕರು 18 ರಿಂದ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅವರ ಮಾಸಿಕ ಆದಾಯ 15000 ಅಥವಾ ಅದಕ್ಕಿಂತ ಕಡಿಮೆ ಹೊಂದಿರಬೇಕು ಸ್ವಯಂ ಉದ್ಯೋಗಿಗಳ ವಾರ್ಷಿಕ ವಹಿವಾಟು ಗರಿಷ್ಠ 1.50 ಕೋಟಿ ರೂಪಾಯಿ ಒಳಗಿರಬೇಕು ಮತ್ತು ಆದಾಯ ತೆರಿಗೆಯನ್ನು ಪಾವತಿಸುವವರಾಗಿರಬಾರದು ಎಂದು ಅವರು ಹೇಳಿದರು.

ಈ ಯೋಜನೆಯಡಿ ವಂತಿಕೆದಾರರು ಮಾಹೆಯಾನ ಪಾವತಿಸಬೇಕಾದ ವಂತಿಕೆಯ ಅತ್ಯಂತ ಕಡಿಮೆ ಇದ್ದು, ಕನಿಷ್ಠ 55 ರೂಪಾಯಿ ಹಾಗೂ ಗರಿಷ್ಠ 200 ರೂಪಾಯಿ ಆಗಿರುತ್ತದೆ. ಕೇಂದ್ರ ಸರ್ಕಾರವು ವಂತಿಕೆದಾರರು ಮಾಹೆಯಾನ ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಅವರವರ ಪಿಂಚಣಿ ಖಾತೆಗೆ ಪಾವತಿಸುತ್ತದೆ. 60 ವರ್ಷ ಪೂರ್ಣಗೊಂಡ ನಂತರ ವಂತಿಕೆದಾರರು ಅಂದರೆ ಪಲಾನುಭವಿಗಳು ತಿಂಗಳಿಗೆ 3000 ರೂಪಾಯಿಗಳು ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದರು.

ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ದಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ದ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇತರೆ ಅಸಂಘಟತ ವಲಯದ ಎಲ್ಲ ಕಾರ್ಮಿಕರು ಈ ಯೋಜನೆಯ ಉಪಯೋಗವನ್ನು ಪಡೆಯಬೇಕು ಎಂದು ಹೆಳಿದರು.

ಈ ಯೋಜನೆ ಪ್ರಸ್ತುತ ಮಾರ್ಚ್ 7 ರಿಂದ ಪ್ರಾರಂಭವಾಗಿದ್ದು ಮಾರ್ಚ್ 15 ರೋಳಗೆ ಉತ್ತಮ ರೀತಿಯ ಫಲಿತಾಂಶ ಪಡೆಯಬೇಕು, ಗ್ರಾಮ ಓನ್ ಯೋಜನೆಯ ರೀತಿಯಲ್ಲಿ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆ ಜನ ಮನ್ನಣೆಯನ್ನು ಪಡೆಯಬೇಕು ಇದಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಕೈಜೊಡಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದರು.

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆಯ ಸೌಲಭ್ಯಗಳು :

ಕೇಂದ್ರ ಸರ್ಕಾರವು ಚಂದಾರದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ 3000 ರೂ. ಗಳ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗಿರುತ್ತಾರೆ.

ಚಂದಾದಾರರು 10 ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಿಸಿದಲ್ಲಿ, ಅವರು ಪಾವತಿಸಿರುವ ವಂತಿಗೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ. 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದಲ್ಲಿ ಅವರು ಪಾವತಿಸಿದ ವಂತಿಕೆಯೊಂದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವುದು ಹೆಚ್ಚೋ ಅದನ್ನು ಪಾವತಿಸಲಾಗುವುದು.

ಫಲಾನುಭವಿಯು ನಿರಂತರವಾಗಿ ವಂತಿಕೆಯನ್ನು ಪಾವತಿಸಿದ್ದು, ಅವರ 60 ವರ್ಷದ ಒಳಗಾಗಿ ಮೃತಪಟ್ಟಲ್ಲಿ ಅಥವಾ ಶಾಶ್ವತ ಅಂಗ ನ್ಯೂನತೆಯಿಂದ ವಂತಿಕೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ ಅವನ/ಅವಳ ಪತಿ/ಪತ್ನಿ ನಂತರ ಈ ಯೋಜನೆಗೆ ಸೇರಬಹುದಾಗಿದ್ದು, ವಂತಿಕೆಯನ್ನು ಪಾವತಿಸಿ ಮುಂದುವರಿಸಬಹುದಾಗಿರುತ್ತದೆ ಅಥವಾ ಅವರ ವಂತಿಕೆಯನ್ನು ಬಡ್ಡಿಯೊಂದಿಗೆ ಪಡೆಯಲು ಅರ್ಹರಾಗಿರುತ್ತಾರೆ.

ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತಪಟ್ಟಲ್ಲಿ, ಅವರ ಪತ್ನಿ/ಪತಿ ಮಾತ್ರ ಪಿಂಚಣಿಯ ಶೇ.50 ರಷ್ಟು ಪಿಂಚಣಿಯನ್ನು ಪಡೆಯಲು ಅರ್ಹರಾಗಿರುತ್ತಾರೆ.

ಯೋಜನೆಯ ವಿದ್ಯುನ್ಮಾನ ಆಧಾರಿತವಾಗಿದ್ದು ಎಸ್.ಎಂ.ಎಸ್ ಮೂಲಕ ಎಲ್ಲ ವ್ಯವಹಾರಗಳ ಮಾಹಿತಿಯನ್ನು ಫಲಾನುಭವಿಗೆ ಕಾಲ ಕಾಲಕ್ಕೆ ತಿಳಿಸಲಾಗುವುದು.

ಯೋಜನೆಯಡಿ ಫಲಾನುಭವಿಗಳು ಹೊಂದಿರಬೇಕಾದ ಅರ್ಹತೆಗಳು :

ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18 ರಿಂದ 40 ವರ್ಷದೊಳಗಿರಬೇಕು. ಅವರ ಮಾಸಿಕ ಆದಾಯ 15000 ರೂಪಾಯಿ ಅಥವಾ ಅದಕ್ಕಿಂತ ಕಡಿಮೆ ಹೊಂದಿರಬೇಕು.

ಫಲಾನುಭವಿಗಳು ಆದಾಯ ತೆರಿಗೆ, ಇ.ಎಸ್.ಐ, ಪಿ.ಎಫ್, ಎನ್.ಪಿ.ಎಸ್. ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು.

ಫಲಾನುಭವಿಗಳು ನೋಂದಣಿ ವಿಧಾನ :

ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ “ಕಾಮನ್ ಸರ್ವಿಸ್ ಸೆಂಟರ್” (ಸಿ.ಎಸ್.ಸಿ) ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಬಹುದಾಗಿರುತ್ತದೆ. ಸಿ.ಎಸ್.ಸಿ ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇ.ಎಸ್.ಐ ಕಾಪೆರ್Çೀರೇಷನ್ ಹಾಗೂ ಭವಿಷ್ಯನಿಧಿ ಸಂಘಟನೆಯ ಕಛೇರಿಗಳು ಹಾಗೂ ಇಲಾಖೆಯ ವೆಬ್ ಸೈಟ್ hಣಣಠಿ:// ಟoಛಿಚಿಣoಡಿ.ಛಿsಛಿಛಿಟouಜ.iಟಿ ಗಳಲ್ಲಿ ಪಡೆಯಬಹುದು.

ಕಾರ್ಮಿಕರು ತಮ್ಮೊಂದಿಗೆ ಆರಂಭಿಕ ವಂತಿಗೆ ಮೊತ್ತ, ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐ.ಎಫ್.ಎಸ್.ಸಿ ಕೋಡ್ ವಿವರಗಳೊಂದಿಗೆ(ಬ್ಯಾಂಕ್ ಪಾಸ್ ಪುಸ್ತಕ/ಚೆಕ್ ಪುಸ್ತಕ/ಬ್ಯಾಂಕ್ ಸ್ಟೇಟ್ ಮೆಂಟ್), ತಮ್ಮ ನಾಮನಿರ್ದೇಶಿತರ ವಿವರಗಳು ಮತ್ತು ಮೊಬೈಲ್ ಹ್ಯಾಂಡ್ ಸೆಟ್ ನೊಂದಿಗೆ ಕಾಮನ್ ಸರ್ವೀಸ್ ಸೆಂಟರ್ ಗಳಿಗೆ ನೋಂದಣಿ ಮಾಡಬೇಕು.

ಅನುಬಂಧದಲ್ಲಿ ತಿಳಿಸಿರುವಂತೆ ಅನುಗುಣವಾಗಿ ಆರಂಭಿಕ ವಂತಿಕೆಯನ್ನು ನಗದು ರೂಪದಲ್ಲಿ ಪಾವತಿಸುವುದು ಹಾಗೂ ಮಾಸಿಕ ವಂತಿಕೆಯನ್ನು ಅವರ ಖಾತೆಯಿಂದ ಆಟೋ-ಡೆಬಿಟ್ ಮೂಲಕ ಕಟಾವು ಮಾಡಿಕೊಳ್ಳಲಾಗುತ್ತದೆ.

ಸಂಪರ್ಕಿಸಬಹುದಾದ ವಿಳಾಸಗಳು : 4 ಸಹಾಯ ಕೇಂದ್ರಗಳು

ಟೋಲ್ ಫ್ರೀಕಾಲ್ ಸೆಂಟರ್ ಸಂಖ್ಯೆ : 1800-267-6888
ಎಲ್.ಐ.ಸಿ.ಯ ವೆಬ್ ಸೈಟ್ ವಿಳಾಸ :

: www.licindia.in

ಸಮೀಪದ ಸಿ.ಎಸ್.ಸಿ ಸೆಂಟರಗಳಾದ : http:// locator.csccloud.in
ಹೆಚ್ಚಿನ ಮಾಹಿತಿಗಾಗಿ : : maandhan.in ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, 1 ನೇ ವೃತ್ತ ಹಿರಿಯ ಕಾರ್ಮಿಕ ನಿರೀಕ್ಷಕರು, 3 ನೇ ವೃತ್ತ ಹಿರಿಯ ಕಾರ್ಮಿಕ ನಿರೀಕ್ಷಕರು, ಬೆಳಗಾವಿ ಮಹಾನಗರ ಪಾಲಿಕೆ ಉಪ ಆಯುಕ್ತರು, ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.