Belagavi News In Kannada | News Belgaum

ಅಂತರರಾಷ್ಟ್ರೀಯ ಮಟ್ಟದ ಸ್ವಿಮ್ಮಿಂಗ್ ಚಾಂಪಿಯನ್‍ಶಿಪ್‍ನಲ್ಲಿ 4 ಚಿನ್ನ ಹಾಗೂ 2 ಕಂಚಿನ ಪದಕ

ಬೆಳಗಾವಿ: ಬೆಳಗಾವಿ ತಾಲೂಕಿನ ಕಡೋಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು ಶ್ರೀಲಂಕಾದಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಸ್ವಿಮ್ಮಿಂಗ್ ಚಾಂಪಿಯನ್‍ಶಿಪ್‍ನಲ್ಲಿ 4 ಚಿನ್ನ ಹಾಗೂ 2 ಕಂಚಿನ ಪದಕಗಳನ್ನು ಪಡೆದುಕೊಳ್ಳುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಕಡೋಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳಾದ ಜ್ಯೋತಿ ಕೋರಿ ಇದೇ ಮಾರ್ಚ್ 5 ರಂದು ಶ್ರೀಲಂಕಾದ ಕೊಲಂಬೋದ ಥೂರಸ್ತಾನ್ ಕಾಲೇಜಿನಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಶ್ರೀಲಂಕಾ ಮಾಸ್ಟರ್ಸ್ ಶಾರ್ಟ್ ಕೋರ್ಸ್ ಸ್ವಿಮ್ಮಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಿ ಚಿನ್ನ ಹಾಗೂ ಕಂಚಿನ ಪದಕಗಳನ್ನು ಬಾಚಿಕೊಂಡು ಬಂದಿದ್ದು ಶ್ಲಾಘನೀಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಶಶಿಕಾಂತ ಮುನ್ಯಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.//////