Belagavi News In Kannada | News Belgaum

ಕಾರುಗಳು ಪರಸ್ಪರ ಡಿಕ್ಕಿ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವು

ತುಮಕೂರು: ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರುಗಳು ಜಖಂಗೊಂಡಿದ್ದರೆ, ಒಂದು ಕಾರಿನಲ್ಲಿದ್ದ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ತುಮಕೂರು ಹೊರವಲಯದ ನಾಮದ ಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಆಮ್ನಿ ಹಾಗೂ ಇನ್ನೊಂದು ಕಾರುಗಳ ಮಧ್ಯೆ ಡಿಕ್ಕಿಯಾಗಿದ್ದು, ಆಮ್ನಿಯಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟವರು ಇರಕಸಂದ್ರ ಕಾಲನಿಯ ದಂಪತಿ.
ಡಿಕ್ಕಿ ಹೊಡೆದ ಇನ್ನೊಂದು ಕಾರಿನಲ್ಲಿದ್ದ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಅವರಿಗೆ ಗಂಭೀರವಾದ ಗಾಯಗಳಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.//////