Belagavi News In Kannada | News Belgaum

ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿ ಪ್ರಾಣಬಿಟ್ಟ ತಾಯಿ

ಬೆಳಗಾವಿ: ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ಖಾನಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಖಾನಾಪುರ ತಾಲೂಕಿನ ಗಂಗವಾಳಿ ಗ್ರಾಮದ ನಿವಾಸಿ ಉಜ್ವಲಾ ಅರುಣ ಶಿಂಧೆ(24) ಮೃತ ಮಹಿಳೆ. ಉಜ್ವಲಾ ನಿನ್ನೆ ತೀವ್ರ ಹೆರಿಗೆ ನೋವಿನಿಂದಾಗಿ ಖಾನಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಆರೋಗ್ಯ ಪರೀಕ್ಷಿಸಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಹೊಟ್ಟೆಯಲ್ಲಿ ಅವಳಿ ಮಕ್ಕಳಿರುವುದನ್ನು ಗಮನಿಸಿ ಕೂಡಲೇ ಹೆರಿಗೆ ಮಾಡಿಸಿದ್ದಾರೆ.
ಹೆರಿಗೆ ಸಮಯದಲ್ಲಿ ತೀವ್ರ ರಕ್ತಸ್ರಾವದಿಂದ ನಿತ್ರಾಣಗೊಂಡಿದ್ದ ಬಾಣಂತಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಶಿಶುಗಳ ಆರೋಗ್ಯ ಪರೀಕ್ಷಿಸಿದ ವೈದ್ಯರು ಅವು ಸಮರ್ಪಕವಾಗಿ ಬೆಳವಣಿಗೆ ಹೊಂದಿರದ ಕಾರಣ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನವಜಾತ ಶಿಶುಗಳು ಆರೋಗ್ಯದಿಂದಿದ್ದು, ಚೇತರಿಸಿಕೊಳ್ಳುತ್ತಿವೆ ಎಂದು ಮೂಲಗಳಿಂದ ವರದಿಯಾಗಿದೆ./////