Belagavi News In Kannada | News Belgaum

ವಿದ್ಯಾರ್ಥಿಗಳ ಜೀವನಕ್ಕೆ ಉತ್ತಮ ಮೌಲ್ಯಗಳು ಅವಶ್ಯ: ರಾಂಪುರೆ

ಹುಣಸಗಿ : ಹುಣಸಗಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ,ಎ, ಹಾಗೂ ಬಿಕಾಂ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ಡಾಗತ ಹಾಗೂ ಎನ್,ಎಸ್,ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಗೈಡ್ಸ್, ನ್ಯಾಕ್, ಕ್ರೀಡೆ ಮತ್ತು ಸಾಂಸ್ಕøತೀಕ ಚಟುವಟಿಕೆಗಳ ಉದ್ಘಾಟನೆ ಸಮಾರಂಭ ಅದ್ದುರಿಯಾಗಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ sಸುರಪುರ ಸ,ಪ್ರ,ದ, ಕಾಲೇಜಿನ ವಾಣಿಜ್ಯ ಶಾಸ್ತ್ರ ಸಹ ಪ್ರಾದ್ಯಾಪಕರು ಹಾಗೂ ಕಲ್ಯಾಣ ಕರ್ನಾಟಕ ಸರಕಾರಿ ಕಾಲೇಜುಗಳ ಅದ್ಯಾಪಕರ ಸಂಘದ ಜಿಲ್ಲಾ ಅದ್ಯಕ್ಷರಾದ ಡಾ: ಸಂಗಪ್ಪ ಎಸ್ ರಾಂಪುರೆ ಮಾತನಾಡಿ, ವ್ಯಾಸಂಗದ ಅವಧಿಯಲ್ಲಿ ವಿದ್ಯಾರ್ಥಿಗಳು ಶೀಸ್ತು ಸಂಯಮ ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಗುರಿ ಸಾಧನೆ ಮಾಡಬೇಕು ಎಂದು ಹೇಳಿದರು. ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಗುರಿ ಸಾಧನೆ

ನಂತರ ಹುಣಸಗಿ ತಾಲೂಕು ನೂತನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೆಂಕಟಗೀರಿ ದೇಶಪಾಂಡೆ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು ವೈಯಕ್ತಿಕ ಬೆಳವಣಿಗೆ ಮಾತ್ರವಲ್ಲದೆ ಸಮಾಜ ಮತ್ತು ದೇಶದ ಪ್ರಗತಿ ಬಗ್ಗೆಯು ವಿದ್ಯಾರ್ಥಿ, ಯುವಜನರಿಗೆ ಜವಾಬ್ದಾರಿ ಇರಬೇಕು.

ಒದುವ ಸಮಯದಲ್ಲಿ ಕಾಲಹರಣ ಮಾಡಿದರೆ ಕಷ್ಟ , ನೋವು ಕಟ್ಟಿಟ್ಟ ಬುತ್ತಿ ಎಂಬುದು ಮರೆಯಬಾರದು. ನೈತಿಕ ಮಾರ್ಗದಲ್ಲಿ ನಡೆದು ಗುರಿ ಸಾಧನೆ ಮಾಡಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾದಕ್ಷೆ ಮಹಾದೇವಿ ಬೇವಿನಾಳಮಠ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಪರಿಷತ್ತಿನ ಸದಸ್ಯ ರಾಘವೇಂದ್ರ ಜಾಗೀರದಾರ್, ಪ್ರಾಚಾಂiÀರ್i ಚೆನ್ನಬಸಯ್ಯ ಹಿರೇಮಠ ಮಾತನಾಡಿದರು.
ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೆಂಕಟಗೀರಿ ದೇಶಪಾಂಡೆ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಪರಿಷತ್ತಿನ ಸದಸ್ಯ ರಾಘವೇಂದ್ರ ಜಾಗೀರದಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂಧರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಿ.ಎಸ್, ಬಿರಾದಾರ ಡಾ: ಜಗದೀಶಕುಮಾರ ನಾಯಕ್, ಮಹಾದೇವಪ್ಪ, ವೀರೆಂದ್ರ ಪಾಟೀಲ್, ಸಂತೋಷ ನಡಿಹಾಳ, ವಿಜಯಲಕ್ಷ್ಮೀ ಸೇರಿದಂತೆ ಎಲ್ಲಾ ಬೋದಕ ಮತ್ತು ಬೋದಕೇತರ ಸಿಬ್ಬಂದಿ, ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು