Belagavi News In Kannada | News Belgaum

ಮಾರ್ಚ್ 13 ರಂದು ಖಾನಾಪೂರ ನೂತನ ಬಸ್ ನಿಲ್ದಾಣದ ಶಂಕು ಸ್ಥಾಪನೆ 

ಬೆಳಗಾವಿ,ಮಾ.12  :  ಜಿಲ್ಲೆಯ ಖಾನಾಪೂರದಲ್ಲಿ ಮಾರ್ಚ್ 13(ರವಿವಾರ) ರಂದು ಬೆಳಿಗ್ಗೆ 11 ಗಂಟೆಗೆ ನೂತನ ಬಸ್ ನಿಲ್ದಾಣದ ಶಂಕು ಸ್ಥಾಪನೆ ನೆರವೇರಲಿದೆ.
ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಸಚಿವ ಬಿ.ಶ್ರೀರಾಮುಲು ನೂತನ ಬಸ್ ನಿಲ್ದಾಣದ ಶಂಕು ಸ್ಥಾಪನೆಯನ್ನು ನೆರವೇಲಿಸಲಿದ್ದು, ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೋವಿಂದ ಕಾರಜೋಳ ಅವರು ಘನ ಉಪಸ್ಥಿತಿಯನ್ನು ವಹಿಸಲಿದ್ದಾರೆ.
ಆಹಾರ ಹಾಗೂ ನಾಗರಿಕ ಸರಬರಾಜು ಸಚಿವರಾದ ಉಮೇಶ ಕತ್ತಿ, ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅಧ್ಯಕ್ಷತೆ ವಹಿಸಿ ಭೂಮಿ ಪೂಜೆ ನೆರವೇರಿಸಲಿದ್ದು, ಹುಬ್ಬಳ್ಳಿ ಕೇಂದ್ರ ಕಚೇರಿಯ ವಾ.ಕ.ರ.ಸಾ.ಸಂಸ್ಥೆಯ ಅಧ್ಯಕ್ಷರಾದ ವ್ಹಿ.ಎಸ್.ಪಾಟೀಲ ಜ್ಯೋತಿ ಬೆಳಗಿಸಲಿದ್ದಾರೆ.
ವಿಧಾನಸಭೆಯ ಉಪ ಸಭಾಧ್ಯಕ್ಷರಾದ ವಿಶ್ವನಾಥ(ಆನಂದ) ಮಾಮನಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಐಹೊಳೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ, ಉತ್ತರ ಕನ್ನಡ ಲೋಕ ಸಭಾ ಸದಸ್ಯರಾದ ಅನಂತರಕುಮಾರ್ ಹೆಗಡೆ, ಬೆಳಗಾವಿ ಲೋಕಸಭಾ ಸದಸ್ಯರಾದ ಮಂಗಲಾ ಅಂಗಡಿ, ಚಿಕ್ಕೋಡಿ ಲೋಕಸಭಾ ಸದಸ್ಯರಾದ ಅಣ್ಣಾಸಾಹೇಬ ಜೊಲ್ಲೆ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಖಾನಾಪೂರ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ವಾ.ಕ.ರ.ಸಾ.ಸಂಸ್ಥೆಯ ಅಧಿಕಾರಿಗಳು ಸಿಬ್ಬಂದಿಗಳು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರಕುಮಾರ ಕಟಾರಿಯಾ, ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಬೆಳಗಾವಿ ಉತ್ತರ ವಲಯದ ಆರಕ್ಷರ  ಮಹಾನಿರೀಕ್ಷಕರಾದ ಎನ್.ಸತೀಶ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ್ ಹೆಚ್.ವ್ಹಿ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ಬೆಳಗಾವಿ ವಿಭಾಗದ ವಾ.ಕ.ರ.ಸಾ.ಸಂಸ್ಥೆಯ ಆಡಳಿತ ಹಾಗೂ ಸಿಬ್ಬಂದಿ ವರ್ಗ ಪ್ರಕಟಣೆಯಲ್ಲಿ ತಿಳಿಸಿದೆ.