Belagavi News In Kannada | News Belgaum

ಭದ್ರತೆ ಹೆಸರಲ್ಲಿ ರೋಲ್ ಕಾಲ್; ಎಎಸ್‌ ಐ ಸಸ್ಪೆಂಡ್

ಬೆಂಗಳೂರು: ವಿಧಾನಸೌಧ ಠಾಣೆಗೆ ವರ್ಗಾವಣೆಗೊಂಡು 11 ತಿಂಗಳಾದರೂ ಕರ್ತವ್ಯಕ್ಕೆ ಹಾಜರಾಗದೇ ರೋಲ್ ಕಾಲ್ ಮಾಡುತ್ತಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಉಪ್ಪಾರಪೇಟೆ ಠಾಣೆಯ ಎ ಎಸ್ ಐ ಆಗಿದ್ದ ಶ್ರೀನಿವಾಸ್ ಶೆಟ್ಟಿ, ಅಕ್ರಮ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಕಾನೂನು ಬಾಹಿರ ಚಟುವಟಿಕೆ ನಡೆಸಲು ಅಪರಾಧಿಗಳ ಜತೆಯೇ ಒಳ ಒಪ್ಪಂದ ಮಾಡಿಕೊಂಡಿದ್ದರು ಎಂಬ ಆರೋಪ ಕೂಡ ಕೇಳಿಬಂದಿತ್ತು. ಕಳೆದ ವರ್ಷ ಅವರನ್ನು ವಿಧಾನಸೌಧ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಆದರೆ ವರ್ಗಾವಣೆಯಾಗಿ 11 ತಿಂಗಳು ಕಳೆದರೂ ಶ್ರೀನಿವಾಸ್ ಕೆಲಸಕ್ಕೆ ಹಾಜರಾಗಿಲ್ಲ. ಎ ಎಸ್ ಐ ಅಧಿಕಾರ ದುರುಪಯೋಗದ ಬಗ್ಗೆ ಗೊತ್ತಾಗುತ್ತಿದ್ದಂತೆ ಇದೀಗ ಶ್ರೀನಿವಾಸ್ ಶೆಟ್ಟಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ