Belagavi News In Kannada | News Belgaum

ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು: ಅರ್ಜಿ ಆಹ್ವಾನ

ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು: ಅರ್ಜಿ ಆಹ್ವಾನ

 

ಬೆಳಗಾವಿ,  : 2021-22ನೇ ಸಾಲಿನಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಅಂಬೇಡ್ಕರ ವಸತಿ ಯೋಜನೆಯಡಿ ಸ್ವಂತ ನಿವೇಶನವುಳ್ಳ ವಸತಿ ರಹಿತ ಹಾರೂಗೇರಿ ಪುರಸಭೆ ವ್ಯಾಪ್ತಿಯ ಅಲ್ಪಸಂಖ್ಯಾತರಿಗೆ ಮನೆಗಳನ್ನು ನಿರ್ಮಿಸಿಕೊಳ್ಳಲು ಆರ್ಥಿಕ ಸೌಲಭ್ಯಕ್ಕಾಗಿ ಅರ್ಜಿ ಕರೆಯಲಾಗಿದೆ.

ಅಲ್ಪಸಂಖ್ಯಾತರಿಗೆ 8, ಸಾಮಾನ್ಯ ವರ್ಗದವರಿಗೆ 49 ಸೇರಿ ಒಟ್ಟು 57 ಹಾಗೂ ಅಂಬೇಡ್ಕರ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿಗೆ 13, ಪರಿಶಿಷ್ಟ ಪಂಗಡಕ್ಕೆ 5 ಸೇರಿದಂತೆ ಒಟ್ಟು 18 ಮನೆಗಳ ಗುರಿಯನ್ನು ನಿಗಿದಪಡಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ ಎಂದು ಹಾರೂಗೇರಿ ಪುರಸಭೆಯ ಮುಖ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಬೆಳಗಾವಿ ಕೇಂದ್ರ ಕಾರಾಗೃಹ: ಖೈದಿಗಳ ಸಂದರ್ಶನಕ್ಕೆ ಅವಕಾಶ

 

ಬೆಳಗಾವಿ, : ರಾಜ್ಯ, ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿರುವ ಬಂಧಿಗಳಿಗೆ ಮಾರ್ಚ್ 21ರಿಂದ ನೇರ ಸಂದರ್ಶನವನ್ನು ಪುನರಾರಂಭಿಸಲಾಗುತ್ತಿದೆ.

ಬಂಧಿಗಳ ಸಂದರ್ಶನಕ್ಕೆ ಬರುವ ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು, ಮತ್ತು ವಕೀಲರು ಮುಂಚಿತವಾಗಿಯೇ ಕಾರಾಗೃಹದ ಇಮೇಲ್, ವಾಟ್ಸ್ಯಾಪ್, ದೂರವಾಣಿ ಮೂಲಕ ಸಂಪರ್ಕಿಸಿ ವಿವರಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು. ಕೋವಿಡ್ ಲಕ್ಷಣಗಳುಳ್ಳವರಿಗೆ, ಎರಡೂ ಡೋಸ್ ಲಸಿಕೆ ಹಾಕಿಸಿಕೊಳ್ಳದಿರುವವರಿಗೆ ಸಂರ್ದಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಕೃಷ್ಣಕುಮಾರ ಅವರನ್ನು ಹಾಗೂ ದೂರವಾಣಿ ಸಂಖ್ಯೆ 0831-2405275, ಮೊಬೈಲ್ ಸಂಖ್ಯೆ: 9480806475 ಹಾಗೂ ಈ ಮೇಲ್ ವಿಳಾಸ ಛಿಠಿbgm.ಠಿಡಿisoಟಿs-ಞಚಿಡಿ@gov.iಟಿ ನ್ನು ಸಂಪರ್ಕಿಸಿ ಎಂದು ಕಾರಾಗೃಹ ಹಾಗೂ ಸುಧಾರಣಾ ಸೇವೆಯ ಪೊಲೀಸ್ ಮಹಾನಿರ್ದೇಶಕರ ನಿರ್ದೇಶನದ ಮೇರೆಗೆ ಬೆಳಗಾವಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಶಹಾಬುದ್ದೀನ್. ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

2ನೇ ಮಹಾಯುದ್ದದ ಗೌರವಧನ: ಜೀವಿತ ಪ್ರಮಾಣಪತ್ರ ಸಲ್ಲಿಸಲು ಸೂಚನೆ

 

ಬೆಳಗಾವಿ, : ರಾಜ್ಯ, ಪ್ರಪಂಚದ ಎರಡನೇ ಮಹಾಯುದ್ದದ ಗೌರವಧನ ಪಡೆಯುತ್ತಿರುವ ಬೆಳಗಾವಿ ಜಿಲ್ಲೆಯ ಫಲಾನುಭವಿಗಳು ಪ್ರತಿವರ್ಷ ಜೀವಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಈವರೆಗೆ ಯಾರು ಜೀವಿತ ಪ್ರಮಾಣ ಪತ್ರ ಸಲ್ಲಿಸಿರುವುದಿಲ್ಲವೋ ಅಂತಹ ಫಲಾನುಭವಿಗಳು ಈಗಾಗಲೇ ತಮಗೆ ಸಲಹೆ ನೀಡಿರುವಂತೆ ಮಾರ್ಚ್ 31 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಾರ್ಯಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಿಂಗ್ ಕಮಾಂಡರ್ ಈಶ್ವರ ಕೊಡೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

33 ಕೆ.ವ್ಹಿ. ಕಾಕತಿ ಉಪಕೇಂದ್ರ: ಮಾರ್ಚ್ 16ರಂದು ವಿದ್ಯುತ್ ವ್ಯತ್ಯಯ

 

ಬೆಳಗಾವಿ, ): ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾರ್ಚ್ 16 ರಂದು 33 ಕೆ.ವ್ಹಿ. ಕಾಕತಿ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯತ್‍ನಲ್ಲಿ ವ್ಯತ್ಯಯ ಆಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಬೆಳಗಾವಿ ತಾಲೂಕಿನ ಕಾಕತಿ ಹಾಗೂ ಸೊನಟ್ಟಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಬೆಳಗಾವಿ ಹು.ವಿ.ಸ.ಕಂ.ನಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////