ಉದ್ಯಮಿಯ ಭೀಕರ ಹತ್ಯೆ ಬೆಳಗಾವಿಯಲ್ಲಿ

ಬೆಳಗಾವಿ: ಬೆಳಗಾವಿ ನಗರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ನಡೆದಿದೆ.
ಭವಾನಿ ನಗರದ ಸಂಸ್ಕೃತಿ ಫಾರ್ಮನ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿಯ ರಾಜು ದೊಡ್ಡಬಮ್ಮನ್ನವರ(45) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.
ಬೆಳಗ್ಗೆ 6 ಗಂಟೆ ಸುಮಾರಿಗೆ ನಗರದ ಗುರುಪ್ರಸಾದ್ ಕಾಲೊನಿಯಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ರಾಜು ಅವರನ್ನು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮೀಣ ಠಾಣೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಪೊಲೀಸರ ತನಿಖೆ ಬಳಿಕವಷ್ಟೇ ಕೊಲೆಗೆ ನಿಖರ ಕಾರಣ ಹಾಗೂ ಕೊಲೆಗಾರರ ಕುರಿತು ಮಾಹಿತಿ ತಿಳಿಯಲಿದೆ.