Belagavi News In Kannada | News Belgaum

ಕಾರು ಅಪಘಾತದಲ್ಲಿ ಮೂವರು ಸಾವು

ಚಿತ್ರದುರ್ಗ:  ಜಿಲ್ಲೆಯ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ದುರ್ಮರಣಕ್ಕೀಡಾಗಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿ ಇದ್ದರು. ಇವರು ಬೆಂಗಳೂರಿನಿಂದ ದಾವಣಗೆರೆ, ದುರ್ಗದೇವಿ ಜಾತ್ರೆಗಾಗಿ ತೆರಳುತ್ತಿದ್ದರು. ಈ ವೇಳೆ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾಡುಹಂದಿಗೆ ಕಾರು ಡಿಕ್ಕಿ ಆಗಿದೆ. ಬಳಿಕ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ರವಿಚಂದ್ರ, ವಿಜಯ್ ಕುಮಾರ್ ಇಬ್ಬರ ಗುರುತು ಪತ್ತೆ ಆಗಿದ್ದು, 59 ವರ್ಷದ ಮಹಿಳೆಯ ಹೆಸರು ಪತ್ತೆ ಆಗಿಲ್ಲ. ಸ್ಥಳಕ್ಕೆ ಡಿವೈಎಸ್ಪಿ ರೋಷರ್ ಜಮೀರ್, ವೃತ್ತ ನಿರೀಕ್ಷಕ ರಾಘವೇಂದ್ರ ಭೇಟಿ ಪರಿಶೀಲನೆ ನಡೆಸಿದ್ರು. ಅಪಘಾತ ಸಂಬಂಧ ಐಮಂಗಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ./////