7ನೇ ವೇತನ ಆಯೋಗ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು: ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ವೇತನ ತಾರತಮ್ಯ ಬಗ್ಗೆ ಕೇಳಲಾದಂತ ಚುಕ್ಕೆ ಗುರುತಿನ ಪ್ರಶ್ನೆಗೆ ವೇತನ ಪರಿಷ್ಕರಿಸೋದಕ್ಕೆ ಆಯೋಗ ರಚನೆ ಮಾಡೋದಾಗಿ ತಿಳಿಸಿದ್ದರು.
ಇದೀಗ ಇಂದು ವಿಧಾನಸಭೆಯಲ್ಲಿ, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಈ ಬಗ್ಗೆ ಸದಸ್ಯರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು 7ನೇ ವೇತನ ಆಯೋಗದ ಅನ್ವಯ ಕೇಂದ್ರ ಸರ್ಕಾರಿ ನೌಕರರಿಗೆ ವೇತನ ನೀತಿ ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೂ ವೇತನ ಪರಿಷ್ಕರಣೆ ಸಲುವಾಗಿ ಸಮಿತಿ ರಚಿಸುವಂತೆ ಪತ್ರದಲ್ಲಿ ಎಂದರು.
ಸರ್ಕಾರಿ ನೌಕರರ ವೇತನ ಪರಿಷ್ಕರಣ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಘೋಷಣೆ ಮಾಡಿದರು./////