Belagavi News In Kannada | News Belgaum

15,000 ಶಿಕ್ಷಕರ ನೇಮಕಾತಿಗೆ ಅರ್ಜಿ

ಬೆಂಗಳೂರು: ಶಿಕ್ಷಕರ ಉದ್ಯೋಗಾಕಾಂಕ್ಷಿಗಳು ಎದುರು ನೋಡುತ್ತಿದ್ದಂತ 15 ಸಾವಿರ ಶಿಕ್ಷಕರ ನೇಮಕಾತಿಗಾಗಿ ಮಾರ್ಚ್ 21ರಂದು ಅಧಿಸೂಚನೆ ಹೊರಡಿಸಲಾಗುತ್ತಿದೆ. ಮಾರ್ಚ್ 23ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಮೇ 21, 22ಕ್ಕೆ ಸಿಟಿಇ ಪರೀಕ್ಷೆ ಕೂಡ ನಡೆಯಲಿದೆ.

ಈ ಮೂಲಕ ಶಿಕ್ಷಕರ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, 15,000 ಶಿಕ್ಷಕರ (6-8) ನೇಮಕಕ್ಕೆ ಮಾರ್ಚ್ 21ಕ್ಕೆ ಅಧಿಸೂಚನೆ ಹೊರಡಿಸಲಾಗುತ್ತದೆ. ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ – 23 ಮಾರ್ಚ್, 2022. ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 22 ಏಪ್ರಿಲ್ 2022. ಸಿಇಟಿ ಪರೀಕ್ಷೆಯು ಮೇ 21, 22ರಂದು ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.///////