Belagavi News In Kannada | News Belgaum

ಗುದನಾಳದಲ್ಲಿ 36 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಣಿಕೆ

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು 36 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ದುಬೈನಿಂದ ಆಗಮಿಸಿದ ಪ್ರಯಾಣಿಕ ತನ್ನ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟು ಪೇಸ್ಟ್ ರೂಪದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ.

24 ಕ್ಯಾರೆಟ್ ನ 706 ಗ್ರಾಂ ಚಿನ್ನ ಪತ್ತೆಯಾಗಿದೆ.ವಶಪಡಿಸಿಕೊಂಡ ಚಿನ್ನದ ಮೌಲ್ಯ 36,53,550 ರೂ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ರೀತಿಯ ಹಲವು ಪ್ರಕರಣಗಳು ಈ ಹಿಂದೆಯೂ ವರದಿಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಸೂಕ್ಷ್ಮವಾಗಿ ಪರೀಕ್ಷೆ ನಡೆಸಿದ ಬಳಿಕವೇ ಪ್ರಯಾಣಿಕರನ್ನು ಹೊರ ಬಿಡುತ್ತಿದ್ದಾರೆ.

ಚಿನ್ನ ಕಳ್ಳ ಸಾಗಾಣಿಕೆಗೆ ಹಲವು ವಾಮ ಮಾರ್ಗಗಳ ನ್ನು ಕಂಡು ಹಿಡಿದರೂ ಅಧಿಕಾರಿಗಳು ಹಲವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.////