Belagavi News In Kannada | News Belgaum

ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಾರಿಗೆ ಸಚಿವ ಶ್ರೀರಾಮುಲು

ಗಾಯಾಳುಗಳಿಗೆ ಸರ್ಕಾರದಿಂದ 1 ಲಕ್ಷ ರೂ. ಪರಿಹಾರ

ತುಮಕೂರು: ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ 8 ಜನ ಮೃತಪಟ್ಟಿರುವ ಅಪಘಾತ ಸ್ಥಳಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಭೇಟಿ ನೀಡಿ ಪರಿಹಾರ ಘೋಷಿಸಿದ್ದಾರೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಮೇಲೆ ವೈ.ಎನ್ ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿಯಾಗಿ 8 ಮಂದಿ ಮೃತಪಟ್ಟು 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿತ್ತು. ಇದೀಗ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶ್ರೀರಾಮುಲು ಮೃತರಿಗೆ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ವೈಯಕ್ತಿಕವಾಗಿ ಶ್ರೀರಾಮುಲು ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ಅಪಘಾತದ ಕುರಿತಾಗಿ ಆರ್.ಟಿ.ಓ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಬಳಿಕ ಪಾವಗಡದ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ./////