Belagavi News In Kannada | News Belgaum

ಏ.5 ರಂದು ಡಾ. ಬಾಬು ಜಗಜೀವನರಾಮ ಜನ್ಮ ದಿನಾಚರಣೆ

ಅರ್ಥಪೂರ್ಣ ಆಚರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

 

ಬೆಳಗಾವಿ, : ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಗುತ್ತಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 115ನೇ ಜನ್ಮ ದಿನಾಚರಣೆಯನ್ನು ಈ ಬಾರಿ ಏಪ್ರಿಲ್ 5 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಮಾ.21) ನಡೆದ ಡಾ. ಬಾಬು ಜಗಜೀವನರಾಮ ಅವರ 115ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಗಜೀನರಾಮ್ ಅವರ ಭಾವಚಿತ್ರದ ಮೆರವಣಿಗೆ, ವೇದಿಕೆ ಕಾರ್ಯಕ್ರಮ, ಉಪನ್ಯಾಸ ನಡೆಯಲಿದೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಭಾವಚಿತ್ರದೊಂದಿಗೆ ಕಡ್ಡಾಯವಾಗಿ ಜಗಜೀವನರಾಮ್ ಅವರ ಜನ್ಮ ದಿನಾವರಣೆಯನ್ನು ಆಚರಿಸಬೇಕು ಎಂದು ಸೂಚಿಸಿದರು.
ಏಪ್ರಿಲ್ 5 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರದ ಮೆರವಣಿಗೆ ಹೊರಡಲಿದ್ದು, ರಾಣಿ ಚೆನ್ನಮ್ಮ ವೃತ್ತದ ಮಾರ್ಗವಾಗಿ ಸಂಗಮೇಶ್ವರ ನಗರದ ಡಾ. ಬಾಬು ಜಗಜೀವನರಾಮ ಉದ್ಯಾನವನ ತಲುಪಲಿದೆ. ನಂತರ ಬೆಳಿಗ್ಗೆ 11 ಗಂಟೆಗೆ ಉದ್ಯಾನವನದಲ್ಲಿ ಜಯಂತಿ ವೇದಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ಕುಡಿಯುವ ನೀರು, ಊಟದ ವ್ಯವಸ್ಥೆ, ಮತ್ತು ಕಾರ್ಯಕ್ರಮದ ಆಯೋಜನೆಗೆ ಬೇಕಾಗುವ ಪೆಂಡಾಲ್, ಖುರ್ಚಿ, ಆಮಂತ್ರಣ ಪತ್ರಿಕೆ ಸೇರಿದಂತೆ ಇನ್ನಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಯಂತಿಯಲ್ಲಿ ಅದ್ಧೂರಿ ಮೆರವಣಿಗೆ ನಡೆಯಲಿದ್ದು ಸ್ಥಳೀಯ 5ಕ್ಕೂ ಹೆಚ್ಚು ಕಲಾ ತಂಡಗಳಿಗμÉ್ಟೀ ಆದ್ಯತೆ ನೀಡಬೇಕು ಜೊತೆಗೆ ಸಮುದಾಯದ ಪ್ರತಿಭಾನ್ವಿತ 5 ರಿಂದ 10 ವಿದ್ಯಾರ್ಥಿಗಳನ್ನು ಸತ್ಕರಿಸಿ ಪೆÇ್ರೀತ್ಸಾಹಿಬೇಕು ಎಂದು ಸಮುದಾಯದ ಮುಖಂಡರು ನೀಡಿದ ಸಲಹೆಗಳಿಗೆ ಜಿಲ್ಲಾಧಿಕಾರಿಗಳು ಒಪ್ಪಿಗೆ ಸೂಚಿಸಿದರು.
ಪೂರ್ವಭಾವಿ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ಉಮಾ ಸಾಲಿಗೌಡರ, ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಭಾಗ್ಯಶ್ರೀ ಹುಗ್ಗಿ ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.///